ದೊಡ್ಡಬಳ್ಳಾಪುರ: ಬಿಜೆಪಿ ತಾಲೂಕು ಘಟಕದ ವತಿಯಿಂದ ತಾಲೂಕಿನ ಪಾಲನಜೋಗಿಹಳ್ಳಿಯ ಲಕ್ಷ್ಮೀನರಸಿಂಹಸ್ವಾಮಿ ಕಲ್ಯಾಣ ಮಂಟಪದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ಅವರ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಶಿಬಿರವನ್ನು ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎ.ವಿ.ನಾರಾಯಣಸ್ವಾಮಿ ಉದ್ಘಾಟಿಸಿ, ಮಾತನಾಡಿ, ಕೋವಿಡ್ ನಿಂದಾಗಿ ಇತ್ತೀಚೆಗೆ ರಕ್ತದಾನ ಶಿಬಿರಗಳು ಕಡಿಮೆಯಾಗುತ್ತಿವೆ. ಆದರೆ ರಕ್ತದ ಅಗತ್ಯ ಮಾತ್ರ ಎಂದಿನಂತೆ ಹೆಚ್ಚಾಗಿದೆ. ರಕ್ತವನ್ನು ರಕ್ತದಾನಿಗಳಿಂದ ಮಾತ್ರ ಪಡೆಯಲು ಸಾಧ್ಯವಾಗಿದ್ದು, ಅರ್ಹ ಎಲ್ಲರೂ ರಕ್ತದಾನ ಮಾಡಿ ಜೀವ ಉಳಿಸಲು ನೆರವಾಗಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಬೆಂ.ಗ್ರಾ.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಿ, ಜಿಲ್ಲಾ ವಕ್ತಾರರಾದ ಪುಷ್ಪಶಿವಶಂಕರ್, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಬಿ.ಸಿ.ನಾರಾಯಣಸ್ವಾಮಿ, ತಾಲೂಕು ಬಿಜೆಪಿ ಅಧ್ಯಕ್ಷ ಟಿ.ಎನ್.ನಾಗರಾಜ್, ಬೆಂ.ಗ್ರಾ.ಜಿಲ್ಲಾ ಫಲಾನುಭವಿಗಳ ಪ್ರಕೋಷ್ಟದ ಸಂಚಾಲಕ ಧೀರಜ್ ಮುನಿರಾಜ್, ನಗರ ಬಿಜೆಪಿ ಅಧ್ಯಕ್ಷ ಎಚ್.ಎಸ್.ಶಿವಶಂಕರ್, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ರಾಜಘಟ್ಟ ಕಾಂತರಾಜು, ಶಿವಾನಂದರೆಡ್ಡಿ, ದೊಡ್ಡಬಳ್ಳಾಪುರ ಯೋಜನಾ ಪ್ರಾಕಾರದ ಅಧ್ಯಕ್ಷ ದಿಬ್ಬೂರು ಜಯಣ್ಣ, ನಾಮಿನಿ ಸದಸ್ಯ ಎನ್.ಕೆ.ರಮೇಶ್, ನಗರಸಭಾ ಮಾಜಿ ಅಧ್ಯಕ್ಷ ಕೆ.ಬಿ.ಮುದ್ದಪ್ಪ, ರಾಜ್ಯ ಸಾಮಾಜಿಕ ಜಾಲತಾಣದ ಸಂಚಾಲಕ ಶಿವಾನಂದರೆಡ್ಡಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಮುನಿರಾಜ್, ಕೃಷ್ಣಮೂರ್ತಿ.ಎಂ, ತಾಲೂಕು ಬಿಜೆಪಿ ವಕ್ತಾರ ಸಿ.ನಾಗರಾಜ್, ಜಿಲ್ಲಾ ಮಾಧ್ಯಮ ಪ್ರಕೋಷ್ಟದ ಸಹ-ಸಂಚಾಲಕರಾದ ಬಂತಿ ವೆಂಕಟೇಶ್, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಕಾರ್ಯದರ್ಶಿ ಅಜಯ್ ತಾಲೂಕು ಯುವಮೋರ್ಚಾ ಅಧ್ಯಕ್ಷ ಕಿರಣ್, ಪ್ರಧಾನ ಕಾರ್ಯದರ್ಶಿಗಳಾದ ಲೋಕೇಶ್ ನಾಗಸಂದ್ರ ಹಾಗೂ ನೇರಳೆಘಟ್ಟ ಚಂದನ್, ತಾಲ್ಲೂಕು ಓಬಿಸಿ ಮೋರ್ಚಾದ ಅಧ್ಯಕ್ಷ ಚಂದ್ರಶೇಖರ್, ಎಸ್ಸಿ ಮೋರ್ಚಾ ಅಧ್ಯಕ್ಷ ದೇವರಾಜ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಜನಶಕ್ತಿ, ಶ್ರೀಧರ್, ತಾಲ್ಲೂಕು ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಅಮ್ಜದ್ (ಅಮ್ಮು) ಮತ್ತಿತರರು ಉಪಸ್ಥಿತರಿದ್ದರು.
ಈ ಶಿಬಿರದಲ್ಲಿ ಒಟ್ಟು 131 ಯೂನಿಟ್ ರಕ್ತವನ್ನು ದಾನಿಗಳಿಂದ ಸಂಗ್ರಹಿಸಿ ರಾಷ್ಟ್ರೋತ್ಥಾನ ರಕ್ತನಿಧಿಗೆ ಸಮರ್ಪಿಸಲಾಯಿತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..