ದೊಡ್ಡಬಳ್ಳಾಪುರ ಪೊಲೀಸರ ಕಾರ್ಯಾಚರಣೆ: ದ್ವಿಚಕ್ರ ವಾಹನ ಕಳ್ಳರ ಬಂಧನ / 6 ಲಕ್ಷ ಮೌಲ್ಯದ 18 ದ್ವಿಚಕ್ರ ವಾಹನಗಳ ವಶ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ ವಿವಿಧೆಡೆ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜೂ.20ರಂದು ಕೊಂಗಾಡಿಯಪ್ಪ ರಸ್ತೆಯಲ್ಲಿ ಹೊಂಡಾ ಆಕ್ಟೀವಾ ದ್ವಿಚಕ್ರ ವಾಹನ ಕಳವು ಪ್ರಕರಣ ತನಿಖೆ ಕೈಗೆತ್ತಿಕೊಂಡ ಪೊಲೀಸರಿಗೆ, ನಂತರ ನಗರ ಸೇರಿದಂತೆ ಸ್ಕೌಟ್ ಕ್ಯಾಂಪ್, ರೈಲ್ವೆ ಸ್ಟೇಷನ್, ಬಾಶೆಟ್ಟಿಹಳ್ಳಿ, ಫ್ಯಾಕ್ಟರಿ ಸರ್ಕಲ್‌ ಹಾಗೂ ಇತರೆ ಕಡೆಗಳಲ್ಲಿ ದ್ವಿಚಕ್ರ ವಾಹನಗಳು ಕಳವಾಗಿ ಪ್ರಕರಣಗಳು ದಾಖಲಾಗಿದ್ದು ಸವಾಲಾಗಿ ಪರಿಣಮಿಸಿತ್ತು.

ಈ ಕುರಿತು ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಡಿವೈಎಸ್ಪಿ ಟಿ.ರಂಗಪ್ಪ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ನೇತೃತ್ವದ ವಿಶೇಷ ತಂಡವನ್ನು ರಚಿಸಲಾಗಿತ್ತು. 

ಈ ತಂಡ ಕಾರ್ಯಾಚರಣೆಗೆ ಇಳಿದಿದ್ದು, ಚಾಕಚಕ್ಯತೆಯಿಂದ ದ್ವಿಚಕ್ರ ಕಳವು ಪ್ರಕರಣಗಳ ಜಾಲವನ್ನು ಭೇದಿಸಿದೆ. ಆರೋಪಿಗಳಾದ ಹೊನ್ನಾಶೆಟ್ಟಿಹಳ್ಳಿ ಗ್ರಾಮದ ಪ್ರವೀಣ (25 ವರ್ಷ), ಹಿಂದೂಪುರದವರಾದ ಶೇಖ್ ನಿಜಾಂ (25ವರ್ಷ), ಮೆಹಬೂಬ್ ಬಾಷಾ (30ವರ್ಷ) ಇವರನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದು, ಈ ಆರೋಪಿಗಳು ಒಂಬತ್ತು ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ತಿಳಿದು ಬಂದಿದೆ. 

ಪ್ರವೀಣ ಮತ್ತು ಶೇಖ್ ನಿಜಾಂ ದೊಡ್ಡಬಳ್ಳಾಪುರ ಹಾಗೂ ಗೌರಿಬಿದನೂರಿನಲ್ಲಿ ಮನೆ ಕನ್ನಾ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಕಳವು‌ ಮಾಡಿದ ದ್ವಿಚಕ್ರ ವಾಹನಗಳನ್ನು ಸಾರ್ವಜನಿಕರಿಗೆ ಅಡವಿಡುತ್ತಿದ್ದ ಆಸಾಮಿಗಳಿಂದ 6 ಲಕ್ಷ ಮೌಲ್ಯದ 18 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಆರೋಪಿಗಳ ಪತ್ತೆಗೆ ಶ್ರಮಿಸಿದ ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಬಿ.ಎಂ.ಗೋವಿಂದ, ಸಿಬ್ಬಂದಿಗಳಾದ ಪಾಂಡುರಂಗ, ಮೌಲಪ್ಪ, ಮುನಿರಾಜು, ಕುಮಾರ್ ಬಾಸಗಿ ಹಾಗೂ ಪುಟ್ಟನರಸಪ್ಪರನ್ನು ಹಿರಿಯ ಅಧಿಕಾರಿಗಳು ಶ್ಲಾಘಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಬಿ.ಮುನೇಗೌಡರ ತಬ್ಬಲಿ ಮಾಡುದ್ರಾ ಜೆಡಿಎಸ್ ವರಿಷ್ಠರು..?!

ಬಿ.ಮುನೇಗೌಡರ ತಬ್ಬಲಿ ಮಾಡುದ್ರಾ ಜೆಡಿಎಸ್ ವರಿಷ್ಠರು..?!

ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಾತ್ಯತೀತ ಜನತಾದಳ (JDS) ಪಕ್ಷದ ಅಧ್ಯಕ್ಷರಾಗಿ ಮಂಜುನಾಥ್ ಕೆ.ವಿ (Manjunath K.V) ಅವರನ್ನು ನೇಮಕ ಮಾಡಲಾಗಿದೆ. ಈ ಮೂಲಕ ಹಲವು ವರ್ಷಗಳ ಕಾಲ ಪಕ್ಷಕ್ಕಾಗಿ ತನು, ಮನ, ಧನವನ್ನ ಅರ್ಪಿಸಿದ್ದ

[ccc_my_favorite_select_button post_id="119223"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ..  ರೈತರಿಗೆ ಅಪಾರ ನಷ್ಟ

ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ.. ರೈತರಿಗೆ ಅಪಾರ ನಷ್ಟ

ಸಹೋದರರು ಒಂದೇ ಕಡೆ ಹಾಕಿದ್ದ ಬಣವೆಗೆ (Haystack) ಆಕಸ್ಮಿಕವಾಗಿ ಬೆಂಕಿ (Fire) ತಗುಲಿ, ಹುಲ್ಲು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ತಾಲೂಕಿನ ***** ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119190"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!