ಪ್ರವಾಹದಿಂದ 550 ಕೋಟಿ ರೂ ಹಾನಿ: ಡಿಸಿಎಂ ಕಾರಜೋಳ

ಬಾಗಲಕೋಟೆ: ಬೆಳಗಾವಿ ವಿಭಾಗ ಮಟ್ಟದಲ್ಲಿ ಸುರಿದ ಮಳೆ ಹಾಗೂ ಪ್ರವಾಹದಿಂದ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ರಸ್ತೆ, ಸೇತುವೆ, ಬಾಂದಾರ ಸೇರಿದಂತೆ ಒಟ್ಟು 550 ಕೋಟಿ ರೂ.ಗಳ ಹಾನಿಯಾಗಿರುವುದಾಗಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.

ಮುಧೋಳ ತಾಲೂಕಿನ ಪ್ರವಾಹ ಬಾಧಿತ ಗ್ರಾಮವಾದ ಮಿರ್ಜಿಯಲ್ಲಿ ಸುದ್ದಿಗಾರರೊಂದಿಗೆ ಈ ವಿಷಯ ತಿಳಿಸಿದ ಅವರು ಹಾನಿಗೊಳಗಾದ ರಸ್ತೆ ಸಂಪರ್ಕ ದುರಸ್ಥಿತಿಗಾಗಿ ತುರ್ತಾಗಿ ಮುಖ್ಯಮಂತ್ರಿಗಳಲ್ಲಿ 50 ಕೋಟಿ ರೂ.ಗಳನ್ನು ನೀಡುವಂತೆ ಮನವಿ ಮಾಡಲಾಗಿದೆ. ಅಲ್ಲದೇ ಮುಖ್ಯಮಂತ್ರಿಗಳ ವಚ್ರ್ಯೂವಲ್ ಸಭೆಯಲ್ಲಿಯೂ ಸಹ ಮನವಿ ಮಾಡಿಕೊಂಡಿರುವುದಾಗಿ ತಿಳಿಸಿದರು.ರಾಜ್ಯದಲ್ಲಿ ಕಳೆದ 2019-20ನೇ ಸಾಲಿನಲ್ಲಿ ಉಂಟಾದ ಪ್ರವಾಹದಿಂದ ಲೋಕೋಪಯೋಗಿ ಇಲಾಖೆಯಿಂದ ಒಟ್ಟು 7800 ಕೋಟಿ ರೂ.ಗಳ ನಷ್ಟವಾದರೆ 2020-21ನೇ ಸಾಲಿನಲ್ಲಿ ಒಟ್ಟು 3800 ಕೋಟಿ ರೂ.ಗಳ ನಷ್ಟವಾಗಿರುತ್ತದೆ. ಪ್ರಸಕ್ತ ವರ್ಷ ಮಳೆ ಹಾಗೂ ಪ್ರವಾಹದಿಂದ ಬೆಳಗಾವಿ ವಿಭಾಗ ಮಟ್ಟದಲ್ಲಿ ಒಟ್ಟು 550 ಕೋಟಿ ರೂ.ಗಳಷ್ಟು ನಷ್ಟವಾಗಿರುವುದಾಗಿ ಕಾರಜೋಳ ತಿಳಿಸಿದರು.

2019-20ನೇ ಸಾಲಿನಲ್ಲಿ 1008 ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಅದಕ್ಕಾಗಿ 500 ಕೋಟಿ ರೂ.ಗಳ ವೆಚ್ಚ ಮಾಡಲಾಗಿದೆ. ಅವುಗಳಲ್ಲಿ ಕೆಲವೊಂದು ಪೂರ್ಣಗೊಂಡಿದ್ದು, ಉಳಿದವುಗಳು ಮುಕ್ತಾಯ ಹಂತದಲ್ಲಿರುತ್ತವೆ. ಅದೇ ರೀತಿ 2020-21ನೇ ಸಾಲಿನಲ್ಲಿ 1675 ಕಾಮಗಾರಿಗಳನ್ನು ಕೈಗೊಂಡಿದ್ದು, ಅದರಲ್ಲಿ 625 ಪೂರ್ಣಗೊಂಡಿರುತ್ತವೆ. ಶೇ.100ಕ್ಕೆ 90 ರಷ್ಟು ಕಾಮಗಾರಿಗಳು ಪೂರ್ಣಗೊಂಡಿರುವುದಾಗಿ ತಿಳಿಸಿದರು.

ಪ್ರಸಕ್ತ ವರ್ಷದಲ್ಲಿ ಉಂಟಾದ ಹಾನಿಗೆ ಶಾಸ್ವತ ಪರಿಹಾರ ಕಂಡುಬೇಕಾಗಿದೆ. ಮಿರ್ಜಿ ಗ್ರಾಮದಲ್ಲಿ ಸಂತ್ರಸ್ಥರನ್ನು ಸಂಪೂರ್ಣ ಸ್ಥಳಾಂತರಿಸಲು ಜಾಗದ ಕೊರತೆ ಉಂಟಾಗಿದ್ದು, ಜಮೀನು ಎರಡು ಎಕರೆ ಜಮೀನು ಸಿಕ್ಕಲ್ಲಿ ಮನೆಗಳನ್ನು ಕಟ್ಟಿಕೊಡುವ ಮೂಲಕ ಸ್ಥಳಾಂತರಕ್ಕೆ ಕ್ರಮವಹಿಸಲಾಗುವುದು ಎಂದು ಕಾರಜೋಳ ತಿಳಿಸಿದರು.

ಪ್ರವಾಹ ಬಾಧಿತ ಪ್ರದೇಶಗಳಿಗೆ ಡಿಸಿಎಂ ಕಾರಜೋಳ ಭೇಟಿ: ಧಾರಾಕಾರವಾಗಿ ಸುರಿದ ಮಳೆ ಹಾಗೂ ಅತಿವೃಷ್ಟಿಯಿಂದ ಮುಧೋಳ ತಾಲೂಕಿನ ಬಾದಿತಗೊಳಗಾದ ಮಿರ್ಜಿ, ಆಲಗುಂಡಿ, ಬುದ್ನಿ ಬಿ.ಕೆ, ಮಾಚಕನೂರು, ಅಂತಾಪುರ  ಒಂಟಗೋಡಿ, ಉತ್ತೂರು ಸೇರಿದಂತೆ ವಿವಿಧ  ಬಾಧಿತ ಪ್ರದೇಶಗಳಿಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮನೆ ಹಾನಿ, ಬೆಳೆ ಹಾನಿ, ರಸ್ತೆ, ಸೇತುವೆಗಳ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಯನ್ನು  ಪರಿಶೀಲನೆ ಮಾಡುವದರ ಜೊತೆಗೆ ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿದರು. ಸಂತ್ರಸ್ತರಿಗೆ  ಕೂಡಲೇ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಿ, ಆರೈಕೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಅತಿವೃಷ್ಠಿಯಿಂದ ಸಂಭವಿಸಬಹುದಾದ ಅನಾಹುತಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಸುರಕ್ಷಿತ ಸ್ಥಳದಲ್ಲಿರುವಂತೆ ಮನವರಿಕೆ ಮಾಡಿಕೊಡಲು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ಪ್ರಶಾತ, ಮುಧೋಳ ತಹಶೀಲ್ದಾರ ಬಾಡಗಿ ಸೇರಿದಂತೆ ಇತರರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….. 

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

[ccc_my_favorite_select_button post_id="117333"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]