ದೊಡ್ಡಬಳ್ಳಾಪುರ: 2021-22ನೇ ಸಾಲಿನಲ್ಲಿ ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಸಂಬಂಧಿಸಿದಂತೆ ನವೋದಯ ವಿದ್ಯಾಲಯ ಸಮಿತಿಯಿಂದ 2021ರ ಆಗಸ್ಟ್ 11 ರಂದು ಪ್ರವೇಶ ಪರೀಕ್ಷೆಯನ್ನು ನಿಗದಿಪಡಿಸಲಾಗಿದೆ ಎಂದು ದೊಡ್ಡಬಳ್ಳಾಪುರ ತಾಲೂಕಿನ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಚಕ್ರವರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು www.navodaya.gov.in ವೆಬ್‍ಸೈಟ್‍ದಿಂದ ತಮ್ಮ ಪ್ರವೇಶಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ತಮಗೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರಕ್ಕೆ ಸರಿಯಾದ ಸಮಯಕ್ಕೆ ಹಾಜರಾಗಬೇಕು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪಾಲಕರು ಹಾಗೂ ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಸಿ.ಆರ್.ಪಿ. ಗಳು ತಮ್ಮ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಡೌನ್‍ಲೋಡ್ ಮಾಡಿಕೊಳ್ಳಲು ತಿಳಿಸಬೇಕು.
ಅಭ್ಯರ್ಥಿಗಳು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ತಿಳಿಸಬೇಕೆಂದು ಅವರು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..