ಬೆಂಗಳೂರು: ಹಿರಿಯ ನಟಿ ಜಯಂತಿ (76ವರ್ಷ) ಅವರು ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ವಯೋಸಹಜ ಕಾಯಿಲೆಯಿಂದ ಬಳಲುತಿದ್ದ ಅವರು, ಇಂದು ಬೆಳಗ್ಗೆ ಅಗಲಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.ಜಯಂತಿ ಅವರು ಕನ್ನಡ, ತಮಿಳು, ತೆಲುಗು, ಹಿಂದಿ ಮಲಯಾಳಂ ಸೇರಿದಂತೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದರು.
ಕನ್ನಡದಲ್ಲಿ ಇವರ ಮೊದಲ ಸಿನಿಮಾ ಜೇನು ಗೂಡು. ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ಜಯಂತಿಯವರು ಮೊದಲ ಬಾರಿಗೆ ವಿಶಿಷ್ಟ ಪಾತ್ರವೊಂದರಲ್ಲಿ ಅಭಿನಯಿಸಿದ್ದರು. ಇವರ ಅಭಿನಯಕ್ಕೆ ಅಭಿನಯ ಶಾರದೆ ಎಂಬ ಬಿರುದನ್ನ ಕನ್ನಡ ಸಿನಿಮಾ ಚಿತ್ರರಂಗ ಗೌರವಿಸಿದೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನಟಿ ಜಯಂತಿ ಎರಡು ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೀಗ ಈ ಸಮಸ್ಯೆ ಉಲ್ಭಣಗೊಂಡು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಐದು ಬಾರಿ ರಾಜ್ಯ ಪ್ರಶಸ್ತಿ ಪಡೆದಿದ್ದ ನಟಿ ಜಯಂತಿ, ‘ಮಿಸ್ ಲೀಲಾವತಿ’ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಮುಡಿಗೇರಿಸಿಕೊಮಡಿದ್ದರು.
ಜಯಂತಿ ನಿಧನದಿಂದ ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿದೆ. ಅಭಿನಯ ಶಾರದೆ ಕಳೆದುಕೊಂಡ ಸ್ಯಾಂಡಲ್‌ವುಡ್‌ನಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..