ದೇಶಾದ್ಯಂತ 22ನೇ ವರ್ಷದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ / ಕಾರ್ಗಿಲ್ ಹುತ್ಮಾರಿಗೆ ದೇಶದ ನಮನ

ಬೆಂಗಳೂರು: ಇಂದು ದೇಶಾದ್ಯಂತ ಕಾರ್ಗಿಲ್ ವಿಜಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕಾರ್ಗಿಲ್ ಯುದ್ಧದಲ್ಲಿ ಮಡಿದ ಸೈನಿಕರಿಗೆ ಭಾರತೀಯರು ಗೌರವ ಸಲ್ಲಿಸುತ್ತಿದ್ದಾರೆ. ಆ ರೋಚಕ ಕ್ಷಣದ ನೆನಪಿಗಾಗಿ ಕಾರ್ಗಿಲ್ ವಿಜಯ ದಿವಸ ಆಚರಿಸಲಾಗುತ್ತದೆ.

1999 ಜುಲೈ 26ರಂದು ಭಾರತ ಪಾಕಿಸ್ತಾನ ವಿರುದ್ಧ ಸಾರಿದ ಸಮರದಲ್ಲಿ ಸಂಪೂರ್ಣ ಜಯಶಾಲಿಯಾಯಿತು. ಮೋಸದ ಪಾಕಿಸ್ತಾನಕ್ಕೆ ಭಾರತದ ತಂಟೆಗೆ ಬಂದರೆ ಏನಾಗುತ್ತೆ ಎಂಬುವುದನ್ನು ತೋರಿಸಿಕೊಟ್ಟಿತ್ತು. ಈ ಗೆಲುವಿನ ಸ್ಮರಿಸಲು ಕಾರ್ಗಿಲ್ ವಿಜಯ ದಿವಸ ಆಚರಿಸಲಾಗುವುದು.

ಚಳಿಗಾಲದಲ್ಲಿ ಕಾಶ್ಮೀರದ ಪರ್ವತ ಪ್ರದೇಶದಲ್ಲಿನ ಮೈಕೊರೆಯುವ ಚಳಿ ಹೇಗಿರುತ್ತೆ ಎಂಬುವುದನ್ನು ಊಹಿಸಿ ನೋಡಿ, ನಾವು 16 ಡಿಗ್ರಿ, 10 ಡಿಗ್ರಿ ತಾಪಮಾನಕ್ಕೆ ಚಳಿಯೆಂದು ಒದ್ದಾಡಿದರೆ ನಮ್ಮ ಸೈನಿಕರು ಇರುವ ಆ ಪ್ರದೇಶದಲ್ಲಿ ಮೈನಸ್ ಡಿಗ್ರಿ ಚಳಿಯಿರುತ್ತದೆ. ಈ ಮೈ ಕೊರೆಯುವ ಚಳಿಯಿರುವಾಗ ಗಡಿ ನಿಯಂತ್ರಣ ರೇಖೆಯ ಆಯ ಬದಿಗಳಲ್ಲಿ ಕೆಲವು ಮುಂಚೂಣಿ ಶಿಬಿರಗಳನ್ನು ತೊರೆಯುವುದು, ಅತಿಕ್ರಮಣಕ್ಕೆ ದಾರಿಯಾಗದಂತೆ ಗಸ್ತನ್ನು ಕುಂಠಿತಗೊಳಿಸುವುದು ಪಾಕಿಸ್ತಾನ, ಭಾರತ ಎರಡೂ ಸೇನೆಗಳ ವಾಡಿಕೆ.

ಆದರೆ 1999ರ ಫೆಬ್ರವರಿ ತಿಂಗಳಿನಲ್ಲಿ ಪಾಕಿಸ್ತಾನ ಸೇನೆಯು ತನ್ನ ಕುತಂತ್ರ ಬುದ್ಧಿ ತೋರಿಸಿತು. ಗಡಿ ನಿಯಂತ್ರಣ ರೇಖೆಯ ಭಾರತದ ಬದಿಯಲ್ಲಿರುವ ಶಿಭಿರಗಳ ಮೇಲೆ ಆಕ್ರಮಣಕ್ಕೆ ತನ್ನ ಪಡೆಗಳನ್ನು ಕಳಿಸಿತು. ಇದು ಭಾರತ-ಪಾಕ್ ಯುದ್ಧಕ್ಕೆ ನಾಂದಿಯಾಯಿತು.

ಮೊದಲಿಗೆ ಪಾಕಿಸ್ತಾನವು ಭಾರತದ ಗಡಿ ನಿಯಂತ್ರಣ ರೇಖೆಯನ್ನು ಉಲ್ಲಂಘಿಸಿ ಭಾರತ ನಿಯಂತ್ರಿತ ಕಾಶ್ಮೀರ ಭಾಗಕ್ಕೆ ನುಸುಳಿಕೋರರನ್ನು ಕಳುಹಿಸಿತು. ಭಾರತಕ್ಕೆ ಸೇರಿದ ಸ್ಥಳಗಳನ್ನು ಆಕ್ರಮಿಸಿಕೊಳ್ಳುತ್ತಾ ತನ್ನ ಫಿರಂಗಿಗಳನ್ನು ರಾಷ್ಟ್ರೀಯ ಹೆಚ್ಚಾರಿ 1ಗೆ ತರುವಂತೆ ಅನುಮಾಡಿ ಕೊಂಡಿತು. ಕೆಳ ಮುಷೋಖ್‌ ಕಣಿವೆಯ ಶಿಖರಗಳು, ಡ್ರಾಸ್‌ನ ಮಾರ್ಪೋಲಾ ಪರ್ವತ ಶ್ರೇಣಿಗಳು, ಕಾರ್ಗಿಲ್ ಬಳಿಯ ಕಕ್ಸಾರ್‌, ಸಿಂಧು ನದಿಯ ಪೂರ್ವಕ್ಕಿರುವ ಬೆಟಾಲಿಕ್‌ ವಲಯ, ಗಡಿ ನಿಯಂತ್ರಣ ರೇಖೆಯ ಉತ್ತರಕ್ಕೆ ತಿರಗುವ ಚೋರ್‌ಬಾಟ್ಲಾ ವಲಯದ ಶಿಖರಗಳು ಮತ್ತು ಸಿಯಾಚಿನ್ ಪ್ರದೇಶದ ಟರ್ಟೊಕ್‌ವರೆಗೆ ಪಾಕಿಸ್ತಾನ ಸೇನೆ ಅತಿಕ್ರಮಣ ಮಾಡಿತು.

ಪಾಕಿಸ್ತಾನದ ವಂಚನೆ ಚಳಿಗಾಲದಲ್ಲಿ ಕಾಶ್ಮೀರದ ಪರ್ವತ ಪ್ರದೇಶದಲ್ಲಿನ ಮೈಕೊರೆಯುವ ಚಳಿ ಹೇಗಿರುತ್ತೆ ಎಂಬುವುದನ್ನು ಊಹಿಸಿ ನೋಡಿ, ನಾವು 16 ಡಿಗ್ರಿ, 10 ಡಿಗ್ರಿ ತಾಪಮಾನಕ್ಕೆ ಚಳಿಯೆಂದು ಒದ್ದಾಡಿದರೆ ನಮ್ಮ ಸೈನಿಕರು ಇರುವ ಆ ಪ್ರದೇಶದಲ್ಲಿ ಮೈನಸ್ ಡಿಗ್ರಿ ಚಳಿಯಿರುತ್ತದೆ. ಈ ಮೈ ಕೊರೆಯುವ ಚಳಿಯಿರುವಾಗ ಗಡಿ ನಿಯಂತ್ರಣ ರೇಖೆಯ ಆಯ ಬದಿಗಳಲ್ಲಿ ಕೆಲವು ಮುಂಚೂಣಿ ಶಿಬಿರಗಳನ್ನು ತೊರೆಯುವುದು, ಅತಿಕ್ರಮೇಣಕ್ಕೆ ದಾರಿಯಾಗದಂತೆ ಗಸ್ತನ್ನು ಕುಂಠಿತಗೊಳೀಸುವುದು ಪಾಕಿಸ್ತಾನ, ಭಾರತ ಎರಡೂ ಸೇನೆಗಳ ವಾಡಿಕೆ. ಆದರೆ 1999ರ ಫೆಬ್ರವರಿ ತಿಂಗಳಿನಲ್ಲಿ ಪಾಕಿಸ್ತಾನ ಸೇನೆಯು ತನ್ನ ಕುತಂತ್ರ ಬುದ್ಧಿ ತೋರಿಸಿತು. ಗಡಿ ನಿಯಂತ್ರಣ ರೇಖೆಯ ಭಾರತದ ಬದಿಯಲ್ಲಿರುವ ಶಿಭಿರಗಳ ಮೇಲೆ ಆಕ್ರಮಣಕ್ಕೆ ತನ್ನ ಪಡೆಗಳನ್ನು ಕಳಿಸಿತು. ಇದು ಭಾರತ-ಪಾಕ್ ಯುದ್ಧಕ್ಕೆ ನಾಂದಿಯಾಯಿತು. 

ಮೂರು ಹಂತದಲ್ಲಿ ನಡೆದ ಯುದ್ಧ ಮೊದಲಿಗೆ ಪಾಕಿಸ್ತಾನವು ಭಾರತದ ಗಡಿ ನಿಯಂತ್ರಣ ರೇಖೆಯನ್ನು ಉಲ್ಲಂಘಿಸಿ ಭಾರತ ನಿಯಂತ್ರಿತ ಕಾಶ್ಮೀರ ಭಾಗಕ್ಕೆ ನುಸುಳಿಕೋರರನ್ನು ಕಳುಹಿಸಿತು. ಭಾರತಕ್ಕೆ ಸೇರಿದ ಸ್ಥಳಗಳನ್ನು ಆಕ್ರಮಿಸಿಕೊಳ್ಳುತ್ತಾ ತನ್ನ ಫಿರಂಗಿಗಳನ್ನು ರಾಷ್ಟ್ರೀಯ ಹೆಚ್ಚಾರಿ 1ಗೆ ತರುವಂತೆ ಅನುಮಾಡಿ ಕೊಂಡಿತು. ಕೆಳ ಮುಷೋಖ್‌ ಕಣಿವೆಯ ಶಿಖರಗಳು, ಡ್ರಾಸ್‌ನ ಮಾರ್ಪೋಲಾ ಪರ್ವತ ಶ್ರೇಣಿಗಳು, ಕಾರ್ಗಿಲ್ ಬಳಿಯ ಕಕ್ಸಾರ್‌, ಸಿಂಧು ನದಿಯ ಪೂರ್ವಕ್ಕಿರುವ ಬೆಟಾಲಿಕ್‌ ವಲಯ, ಗಡಿ ನಿಯಂತ್ರಣ ರೇಖೆಯ ಉತ್ತರಕ್ಕೆ ತಿರಗುವ ಚೋರ್‌ಬಾಟ್ಲಾ ವಲಯದ ಶಿಖರಗಳು ಮತ್ತು ಸಿಯಾಚಿನ್ ಪ್ರದೇಶದ ಟರ್ಟೊಕ್‌ವರೆಗೆ ಪಾಕಿಸ್ತಾನ ಸೇನೆ ಅತಿಕ್ರಮಣ ಮಾಡಿತು.

ಭಾರತಕ್ಕೆ ಪಾಕಿಸ್ತಾನ ಕಳ್ಳಾಟದ ಸುಳಿವು ಕೂಡ ಇರಲಿಲ್ಲ ಪಾಕಿಸ್ತಾನ ತನ್ನ ಕುತಂತ್ರ ಬುದ್ಧಿ ತೋರಿದ್ದು ಭಾರತೀಯ ಸೇನೆಯ ಅರಿವಿಗೇ ಬಂದಿರಲಿಲ್ಲ. ಈ ಕುರಿತು ಸೇನೆಗೆ ಕಾಶ್ಮೀರದ ಸ್ಥಳೀಯರೊಬ್ಬರು ಮಾಹಿತಿ ನೀಡುತ್ತಾರೆ. ಆಗ ಎಚ್ಚೆತ್ತ ನಮ್ಮ ಸೇನೆ 5 ಯೋಧರನ್ನು ಗಸ್ತಿಗೆ ಕಳುಹಿಸುತ್ತದೆ. ಆದರೆ ಈ ಯೋಧರನ್ನು ಪಾಪಿಗಳು ಚಿತ್ರ ಹಿಂಸೆ ನೀಡಿ ಕೊಂದು ಹಾಕುತ್ತಾರೆ. ಆಗ ಭಾರತ ಸರಕಾರ ಇಪ್ಪತ್ತು ಸಾವಿರ ಸೈನಿಕರ ಪಡೆ ಸಜ್ಜುಗೊಳಿಸಿ ಆಪರೇಷನ್ ವಿಜಯ್ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸುತ್ತೆ. ಕಾರ್ಗಿಲ್ ದುರ್ಗಮ ಪ್ರದೇಶದ ಒಳಹೊಕ್ಕು ಪಾಕ್ ಬಗ್ಗು ಬಡೆಯಲು ಭೂ ಸೇನೆ ಜೊತೆಗೆ ವಾಯು ಸೇನೆಯೂ ಸೇರಿಕೊಂಡು ‘ಆಪರೇಷನ್ ಸೇಫ್‌ ಸಾಗರ್’ ಎಂಬ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಾರೆ.

ಆರ್‌-77 ಕ್ಷಿಪಣಿ, ಮಿಗ್‌-21 ಮತ್ತು ಮೀರಜ್‌ 2000 ಯುದ್ಧ ವಿಮಾನಗಳನ್ನು ಬಳಸಲಾಗುವುದು. ಬೋಫೋರ್ಸ್ ಬಂದೂಕುಗಳನ್ನು ಬಳಸಲಾಗುತ್ತದೆ, 300 ಫಿರಂಗಿಗಳು, ರಾಕೆಟ್‌ಗಳನ್ನು ಬಳಸುತ್ತಾರೆ. 2ನೇ ವಿಶ್ವ ಯುದ್ಧದ ಬಳಿಕ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಬಳಕೆ ಮಾಡಿದ ಮೊದಲ ಯುದ್ಧ ಇದಾಗಿದೆ. ಈ ಹೋರಾಟದಲ್ಲಿ ಎರಡೂ ದೇಶಗಳಲ್ಲಿ ಸಾಕಷ್ಟು ಸೈನಿಕರು ಪ್ರಾಣ ಕಳೆದುಕೊಂಡರು. ಸತತ ಹೋರಾಟದ ಫಲವಾಗಿ ಟೋಲೊಲಿಂಗ್ ಭಾರತದ ವಶವಾಯಿತು.

ಆಕ್ರಮಿತ ಪ್ರದೇಶದ ಅಂದಾಜು ಶೇ.80ರಷ್ಟು ಭಾಗ ಭಾರತ ವಶಪಡಿಸಕೊಂಡಿತು. ಅಂತಾರಾಷ್ಟ್ರೀಯ ಮಟ್ಟದಲ್ಲೂ ಪಾಕಿಸ್ತಾನದ ಮೇಲೆ ಒತ್ತಡ ಬಿತ್ತು, ಅಷ್ಟರಲ್ಲಿಯೇ ಪಾಕಿಸ್ತಾನದ ಆರ್ಥಿಕ ಸ್ಥಿತಿ ತೀರಾ ಹದಗೆಟ್ಟಿತು.ಯುದ್ಧದಲ್ಲಿ ಸತ್ತ ಪಾಕ್‌ ಸೈನಿಕರನ್ನು ಸ್ವೀಕರಿಸಲೂ ಪಾಕ್ ಹಿಂದೇಟು ಹಾಕಿತು. 1999 ಜುಲೈ 26 ರಂದು ಭಾರತ ಪಾಕಿಸ್ತಾನದ ವಿರುದ್ಧ ಸಾರಿದ ಸಮರದಲ್ಲಿ ಸಂಪೂರ್ಣ ಜಯಶಾಲಿಯಾಯಿತು. ಈ ಗೆಲುವನ್ನು ಸ್ಮರಣೆ ಮಾಡಲು ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಗುತ್ತದೆ.

ಅಂದಿನ ಸಮರದಲ್ಲಿ ನೂರಾರು ದೇಶ ಪ್ರೇಮಿ ಸೈನಿಕರು ದೇಶದ ರಕ್ಷಣೆಗಾಗಿ ಪ್ರಾಣತೆತ್ತರು. ಆದರೆ ಅವರ ತ್ಯಾಗ ಇಂದಿಗೂ ಅವರನ್ನು ಅಜರಾಮರವನ್ನಾಗಿಸಿದೆ.

ಒಂದೋ ನಾನು ತ್ರಿವರ್ಣ ಧ್ವಜವನ್ನು ಹಾರಿಸಿ ಬರುತ್ತೇನೆ ಅಥವಾ ನನ್ನನ್ನು ತ್ರಿವರ್ಣ ಧ್ವಜದಲ್ಲಿ ಸುತ್ತಿ ತರಲಾಗುವುದು ಆದರೆ ನಾನು ಖಂಡಿತವಾಗಿ ಬಂದೇ ಬರುತ್ತೇನೆ ಎಂದು ಯುದ್ದಕ್ಕೆ ತೆರಳಿದ್ದರು ಕ್ಯಾಪ್ಟನ್ ವಿಕ್ರಂ ಬಾತ್ರ.

ಒಂದು ವೇಳೆ ನನ್ನ ಗುರಿ ಮುಟ್ಟುವ ಮುನ್ನ ಸಾವು ಅಪ್ಪಳಿಸಿದರೆ, ಆ ಸಾವನ್ನೇ ನಾನು ಕೊಲ್ಲುತ್ತೇನೆ ಎಂದು ಹೇಳುವೆ ಎಂದವರು ಲೆ.ಮನೋಜ್ ಕುಮಾರ್ ಪಾಂಡೆ.

ಸೈನಿಕ ಎಂಬುವುದು ಒಬ್ಬ ವ್ಯಕ್ತಿಯಲ್ಲ, ನಮ್ಮ ದೇಶದ ಹೆಮ್ಮೆ, ಸೈನ್ಯ ನಮ್ಮ ವೈಭವ, ನಾವು ಪಡೆಯುವ ಗೌರವ: ಕೌಶಿಕ್ ಧಾಕಾಟೆ.

ನನ್ನ ಈ ದೇಶಕ್ಕಾಗಿ ಜೀವ ಕೊಡಲು ಬರೀ ಒಂದೇ ಜೀವನ ಮಾತ್ರ ಇರುವುದಕ್ಕೆ ಬೇಸರವಿದೆ: ಪ್ರೇಮ್ ಚಂದಾನಿ.

ನಮ್ಮ ಶತ್ರುಗಳ ಮೇಲೆ ದೇವರು ಒಂದು ಕರುಣೆ ತೋರಬಹುದು ಆದರೆ ನಾವಲ್ಲ: ಸೈನಿಕ. (ಸಂಗ್ರಹ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!