ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಪ್ರಹಸನ ಅಂತ್ಯಗೊಂಡಿದೆ.
ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಈ ರಾಜೀನಾಮೆ ಸಲ್ಲಿಸುವುದಾಗಿ ಯಡಿಯೂರಪ್ಪ ದುಃಖ ಭರಿತರಾಗಿ ಘೋಷಿಸಿದ್ದಾರೆ.
ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ ಮತ್ತು ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು 75 ವರ್ಷ ಮೇಲ್ಪಟ್ಟ ನಾಯಕರಿಗೆ ಅವಕಾಶ ನೀಡುವುದಿಲ್ಲ, ಆದರೂ ನನ್ಮ ಬಗ್ಗೆ ಅತ್ಯಂತ ವಾತ್ಸಲ್ಯ, ಪ್ರೀತಿ ಮತ್ತು ವಿಶ್ವಾಸದಿಂದ ಅವಕಾಶ ಮಾಡಿಕೊಟ್ಟರು ಎಂದು ಕಣ್ಣೀರಾಕುತ್ತಲೇ ತಿಳಿಸಿದರು.
ಊಟದ ನಂತರ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..