ದೊಡ್ಡಬಳ್ಳಾಪುರ: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ರೈತರಿಗೆ ತಲುಪಿಸಲು ವ್ಯಾಪಕ ಪ್ರಚಾರ ನೀಡುವಂತೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ವಿಮಾ ಕಂಪನಿಗೆ ಸೂಚನೆ ನೀಡಲಾಗುವುದೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೆಶಕ ಜಯಸ್ವಾಮಿ ತಿಳಿಸಿದ್ದಾರೆ.
ಫಸಲ್ ಭೀಮಾ ಯೋಜನೆಗೆ ದೊಡ್ಡಬಳ್ಳಾಪುರದ ಕೃಷಿ ಅಧಿಕಾರಿಗಳು ಹೆಚ್ಚಿನ ಪ್ರಚಾರ ನೀಡದೆ ರೈತರಿಗೆ ಮಾಹಿತಿ ದೊರಕುತ್ತಿಲ್ಲವೆಂಬ ಆರೋಪದ ಹಿನ್ನೆಲೆಯಲ್ಲಿ ಹರಿತಲೇಖನಿಗೆ ಪ್ರತಿಕ್ರಿಯೆ ನೀಡಿರುವ ಅವರು, ಫಸಲ್ ಭೀಮಾ ಯೋಜನೆಯ ಕುರಿತು ರೈತರಿಗೆ ತಲುಪಿಸಲು ಬಹಳಷ್ಟು ಕ್ರಮಕೈಗೊಳ್ಳಲಾಗಿದೆ.
ಇದುವರೆಗೂ ಜಿಲ್ಲೆಯಲ್ಲಿ 476 ಮಂದಿ ವಿಮೆಗೆ ನೊಂದಣಿಯಾಗಿದ್ದಾರೆ. ಆದಾಗ್ಯೂ ತಾಲೂಕು ಮಟ್ಟದಲ್ಲಿ ರೈತರಿಗೆ ಹೆಚ್ಚಿನ ಮಾಹಿತಿ ದೊರಕಿಸಲು ಸ್ಥಳೀಯ ಕೃಷಿ ಇಲಾಖೆ ಅಧಿಕಾರಿಗಳಿಗೆ ಹಾಗೂ ವಿಮಾ ಕಂಪನಿಗೆ ಸೂಚನೆ ನೀಡಲಾಗುವುದು ಎಂದಿದ್ದಾರೆ.
ಇದೇ ವೇಳೆ ರಾಗಿ, ಮೆಕ್ಕೆಜೋಳ ಹಾಗೂ ಹುರುಳಿ ಬೆಳೆಗೆ ಆ.18ರ ವರೆಗೆ ವಿಮೆ ಮಾಡಿಸಲು ಅವಕಾಶ ನೀಡಲಾಗಿದೆ. ಆಸಕ್ತ ರೈತರು ಸ್ಥಳೀಯ ಬ್ಯಾಂಕ್ ಗಳಿಗೆ ತೆರಳಿ ವಿಮೆ ಮಾಡಿಸಬಹುದು ಎಂದವರು ಸ್ಪಷ್ಟಪಡಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..