ದಾವಣಗೆರೆ: ರಾಜ್ಯ ಸರ್ಕಾರ 2 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸರ್ಕಾರದ ಸಾಧನೆ ಬಿಂಬಿಸುವ ಕಿರು ಹೊತ್ತಿಗೆಗಳನ್ನು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಬಿಡುಗಡೆಗೊಳಿಸಿದರು.
ರಾಜ್ಯ ವಾರ್ತಾ ಇಲಾಖೆಯಿಂದ ಹೊರತಂದಿರುವ ‘ಸವಾಲುಗಳ ಮೀರಿದ ಸಾಧನ ಪರ್ವ’ ಹಾಗೂ ‘ಸವಾಲುಗಳ 2 ವರ್ಷ ಸಮೃದ್ಧಿಯ ಸ್ಪರ್ಶ’ ಎಂಬ ಜಿಲ್ಲಾ ಮಟ್ಟದ ಕಿರುಹೊತ್ತಿಗೆಯನ್ನು ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಬಿಡುಗಡೆಗೊಳಿಸಲಾಯಿತು.
ಹಾವೇರಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರವು ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ಹಾವೇರಿ ಜಿಲ್ಲಾ ಅಭಿವೃದ್ಧಿ ಕಾರ್ಯಗಳ ಪ್ರಗತಿ ಕುರಿತಾದ “ಜನಸ್ನೇಹಿ ಆಡಳಿತದ ಎರಡು ವರ್ಷ ಸವಾಲುಗಳ ಮೀರಿದ ಸಾಧನಾ ಪರ್ವ ” ಹೆಸರಿನ ಕಿರುಹೊತ್ತಿಗೆಯನ್ನು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರು ಬಿಡುಗಡೆಗೊಳಿಸಿದರು.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ಪ್ರಗತಿ ಕುರಿತಾದ ಕಿರುಹೊತ್ತಿಗೆ ಬಿಡುಗಡೆಗೊಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊಹಮ್ಮದ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ವಾರ್ತಾಧಿಕಾರಿ ಬಿ.ಆರ್,ರಂಗನಾಥ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಡಿ. ಅಶೋಕ್‍ಕುಮಾರ್, ಸಹಾಯಕ ನಿರ್ದೇಶಕ ಬಿ.ವಿ. ತುಕಾರಾಂ ರಾವ್ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..