ಬೆಳಗಾವಿ: ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಕಾಂಗ್ರೆಸ್ ಪಕ್ಷದ ವತಿಯಂದ ವಿವಿಧ ತಂಡಗಳನ್ನು ರಚಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಬೆಳಗಾವಿ ಜಿಲ್ಲೆಯ ಖಾನಾಪುರ ವಿಧಾನಸಭೆ ಕ್ಷೇತ್ರದಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಕಾಂಗ್ರೆಸ್ ಪಕ್ಷದ ವತಿಯಂದ ವಿವಿಧ ತಂಡಗಳನ್ನು ರಚಿಸಲಾಗಿದೆ ನಂತರ, ಸಮಸ್ಯೆಗಳ ಬಗ್ಗೆ ಹಾಗೂ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಸರ್ಕಾರ ಗಮನಕ್ಕೆ ತರಲಾಗುವುದು. ಅಲ್ಲದೆ ವಿಧಾನ ಮಂಡಲದಲ್ಲೂ ಈ ಬಗ್ಗೆ ಪ್ರಸ್ತಾಪಿಸಲಾಗುವುದು ಎಂದು ತಿಳಿಸಿದ್ದಾರೆ.
ಅತಿವೃಷ್ಟಿ ಹಾಗೂ ಪ್ರವಾಹ ಸಂತ್ರಸ್ತರಿಗೆ ಸರ್ಕಾರದ ಪ್ರಥಮ ಆದ್ಯತೆ ನೀಡುವುದು ಅಗತ್ಯವಿದೆ. 2019ರ ಪ್ರವಾಹ ಸಂತ್ರಸ್ತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಿಲ್ಲ ಎಂದು ಆರೋಪಿಸಿದ ಸಿದ್ದರಾಮಯ್ಯ ಪ್ರಸ್ತುತ ಸಂದರ್ಭದಲ್ಲಿಯೂ ಸ್ಪಂದನೆಯಿಲ್ಲದೆ ಸಂತ್ರಸ್ತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆಂದು ತಿಳಿಸಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕರಾದ ಡಾ.ಅಂಜಲಿ ನಿಂಬಾಳ್ಕರ್, ಲಕ್ಷ್ಮಿ ಹೆಬ್ಬಾಳಕರ್, ಮಾಜಿ ಶಾಸಕ ಅಶೋಕ್ ಪಟ್ಟಣ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..
 
				 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
					 
					 
						 
						 
						 
						