ಫಸಲ್ ಭೀಮಾ ಯೋಜನೆಗೆ ದೊಡ್ಡಬಳ್ಳಾಪುರದ ಕೃಷಿ ಅಧಿಕಾರಿಗಳ‌ ತಾತ್ಸಾರ..? / ರೈತರಿಗಿಲ್ಲ ಯೋಜನೆಯ ಮಾಹಿತಿ..!

ದೊಡ್ಡಬಳ್ಳಾಪುರ: ಬೆಳೆ ನಷ್ಟ, ಬೆಳೆ ವಿಫಲಗೊಂಡ ಸಂದರ್ಭದಲ್ಲಿ ನಷ್ಟ ಹೊಂದಿದ ರೈತರ ಕೈಹಿಡಿಯಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಕೇಂದ್ರ ಸರ್ಕಾರದ ಸಹಭಾಗೀತ್ವದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಆದರೆ ಈ ವಿಮೆ ಮಾಡಿಸಲು ತಾಲೂಕಿನಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ರೈತರಿಗೆ ಸಮರ್ಪಕ ಮಾಹಿತಿ‌ ನೀಡುತ್ತಿಲ್ಲ ಎಂಬ ಆರೋಪ ವ್ಯಾಪಕವಾಗಿ ಕೇಳಿ ಬಂದಿದೆ.

ಬೆಳೆ ವಿಮೆ ಮಾಡಿಸಲು ಸಾಲ ಪಡೆದ ರೈತರಿಗೆ ಬ್ಯಾಂಕ್ ಗಳಲ್ಲಿ ಬ್ಯಾಂಕ್ ಸಿಬ್ಬಂದಿಗಳು ಸ್ವಯಂ ವಿಮೆ ಮಾಡುತ್ತಾರೆ.ಆದರೆ ಸಾಲ ಪಡೆಯದ ರೈತರು ಖಾಸಗಿಯಾಗಿ ಸಿಎಸ್ಸಿ ಕೇಂದ್ರಗಳಲ್ಲಿ ಮಾಡಿಸಬೇಕಿದೆ. ಆದರೆ ಕೃಷಿ ಇಲಾಖೆ, ವಿಮೆ ಕಂಪನಿಗಳು ಯೋಜನೆಯ ಕುರಿತಾದ ಯಾವುದೇ ಮಾಹಿತಿ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಇನ್ನೂ ಈ ಕುರಿತು ಸಿಎಸ್ಸಿ ಕೇಂದ್ರಗಳಲ್ಲಿ ವಿಚಾರಿಸಿದರೆ ಆನ್ಲೈನ್ ಮೂಲಕ ತರಬೇತಿ ಹೊರತುಪಡಿಸಿ ಕೃಷಿ ಇಲಾಖೆ ಹಾಗೂ ವಿಮೆ ಕಂಪನಿ ಮಾಹಿತಿ ಅಥವಾ ಅರ್ಜಿ ನೀಡಿಲ್ಲ. ಬಹುತೇಕ ರೈತರು ವಿಮೆ ಆಸಕ್ತಿ ಹೊಂದಿದ್ದಾರೆ. ಆದರೆ ಅರ್ಜಿ ಇಲ್ಲದೆ ವಿಮೆ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುತ್ತಾರೆ.

ರೈತರ ಬೆಳೆಗಳ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಬೆಳೆ ವಿಮೆಯ ಗರಿಷ್ಠ ಲಾಭ ರೈತರಿಗೆ ತಲುಪುವಂತೆ ಕೇಂದ್ರ ಸರ್ಕಾರವು 2021-22ರ ಆರ್ಥಿಕ ವರ್ಷಕ್ಕೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (ಪಿಎಂಎಫ್‌ಬಿವೈ) ಗೆ 16,000 ಕೋಟಿ ರೂ. ನೀಡಿದೆ. ಇದು ಹಿಂದಿನ 2020-21ರ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಸುಮಾರು 305 ಕೋಟಿ ರೂ.ಗಳ ಬಜೆಟ್ ಹೆಚ್ಚಳವಾಗಿದೆ. ಇದು ದೇಶದ ಕೃಷಿ ಕ್ಷೇತ್ರದ ಬೆಳವಣಿಗೆಗೆ ಸರ್ಕಾರದ ಬದ್ಧತೆ ಪುನರುಚ್ಚರಿಸುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಸಚಿವಾಲಯದ ಪ್ರಕಾರ, ಐದು ವರ್ಷಗಳ ಹಿಂದೆ ಜನವರಿ 13, 2016 ರಂದು ಭಾರತ ಸರ್ಕಾರ ಈ ಪ್ರಮುಖ ಬೆಳೆ ವಿಮಾ ಯೋಜನೆಗೆ ಅನುಮೋದನೆ ನೀಡಿತು. ರೈತರಿಗೆ ದೇಶಾದ್ಯಂತ ಕಡಿಮೆ ಏಕರೂಪದ ಪ್ರೀಮಿಯಂನಲ್ಲಿ ಸಮಗ್ರ ಪರಿಹಾರವನ್ನು ಒದಗಿಸುವ ಮೈಲಿಗಲ್ಲು ಉಪಕ್ರಮವಾಗಿ ಈ ಯೋಜನೆಯನ್ನು ರೂಪಿಸಲಾಯಿತು. ಇಂದು, ಪಿಎಂಎಫ್‌ಬಿವೈ ಜಾಗತಿಕವಾಗಿ ರೈತರ ಭಾಗವಹಿಸುವಿಕೆಯ ದೃಷ್ಟಿಯಿಂದ ಅತಿದೊಡ್ಡ ಬೆಳೆ ವಿಮಾ ಯೋಜನೆಯಾಗಿದೆ ಮತ್ತು ಪ್ರೀಮಿಯಂ ವಿಷಯದಲ್ಲಿ 3 ನೇ ದೊಡ್ಡ ಯೋಜನೆಯಾಗಿದೆ. 5.5 ಕೋಟಿಗೂ ಹೆಚ್ಚು ರೈತ ಅರ್ಜಿಗಳನ್ನು ವರ್ಷದಿಂದ ವರ್ಷಕ್ಕೆ ಸ್ವೀಕರಿಸಲಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕಳೆದ 5 ವರ್ಷಗಳಲ್ಲಿ, ರೈತರು – ಕಲ್ಯಾಣ, ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ರಚನಾತ್ಮಕ, ವ್ಯವಸ್ಥಾಪನಾ ಮತ್ತು ಇತರ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (ಪಿಎಂಎಫ್‌ಬಿವೈ) ಯೋಜನೆಯನ್ನು ಪುನರುಜ್ಜೀವನಗೊಳಿಸಲು ವ್ಯಾಪಕವಾಗಿ ಕೆಲಸ ಮಾಡುತ್ತಿದೆ. ಆದರೆ ಕೆಲ ಅಧಿಕಾರಿಗಳ ಬೇಜವಬ್ದಾರಿಯಿಂದ ಯೋಜನೆಯ ಲಾಭ ರೈತರಿಗೆ ದೊರಕದಾಗಿರುವುದು ವಿಪರ್ಯಾಸ.

ಅಧಿಕಾರಿಗಳ ವೈಫಲ್ಯ: ಕಾಳಜಿಹೀನ ಅಧಿಕಾರಿಗಳಿಂದಾಗಿ ರೈತರಿಗೆ ಯೋಜನೆಗಳು ತಲುಪುತ್ತಿಲ್ಲ. ಮಳೆ ತೀವ್ರವಾಗಿ ಸುರಿದು ಬೆಳೆ ನಷ್ಟವಾಗುತ್ತಿದೆ. ವಿಮೆ ಮಾಡಿಸಿದರೆ ರೈತನಿಗೆ ಅನುಕೂಲ. ಆದರೆ ಅಧಿಕಾರಿಗಳು ಮಾಹಿತಿ ನೋಡುತ್ತಿಲ್ಲ ಎಂದು ರೈತ ಸಂಘದ ಜಿಲ್ಲಾ ಯುವ ಘಟಕದ ಅಧ್ಯಕ್ಷ ವಸಂತ್ ಬೇಸರ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ಶಾಕ್ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ಶಾಕ್ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ (D.K.Shivakumar) ಮಂಗಳವಾರ ಪ್ರತಿಕ್ರಿಯೆ ನೀಡಿದರು.

[ccc_my_favorite_select_button post_id="110364"]
ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಆದ್ಯತೆ; ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="110133"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!