ಬೆಂ.ಗ್ರಾ.ಜಿಲ್ಲೆ: ನೂತನ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿಂದು ನಿರ್ಗಮಿತ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ.ಕೆ.ನಾಯಕ ಅವರು ಅಧಿಕಾರ ಹಸ್ತಾಂತರಿಸಿದರು.
ಈ ವೇಳೆ ನಿರ್ಗಮಿತ ಅಪರ ಜಿಲ್ಲಾಧಿಕಾರಿ ಕುರಿತು ಅಧಿಕಾರಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಕಚೇರಿಯಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ನಿರ್ಗಮಿತ ಅಪರ ಜಿಲ್ಲಾಧಿಕಾರಿಗಳು, ಕರ್ನಾಟಕ ರೈಲ್ವೇ ಮೂಲ ಸೌಕರ್ಯ ಅಭಿವೃದ್ಧಿ ಕಂಪನಿ ಲಿಮಿಟೆಡ್(ಕೆ-ರೈಡ್)ಗೆ ವಿಶೇಷ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ತಹಶೀಲ್ದಾರ್ ಟಿ.ಎಸ್.ಶಿವರಾಜ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..