ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಎಸ್ ಬೊಮ್ಮಾಯಿ ಅವರನ್ನು ಬಿಜೆಪಿ ಶಾಸಕಾಂಗ ಸಭೆ ಆಯ್ಕೆಮಾಡಿದೆ.
ಜನತಾದಳದಿಂದ ಬಂದು ಬಿಜೆಪಿಯಲ್ಲಿ ಮುಖ್ಯಮಂತ್ರಿ ಸ್ಥಾನ ಪಡೆದ ಅವರಿಗೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶುಭಕೋರಿದ್ದು, ನನ್ನ ಸ್ನೇಹಿತ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗುತ್ತಿದ್ದಾರೆ ಅವರಿಗೆ ಶುಭವಾಗಲಿ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಸಹಕಾರದ ಭರವಸೆ ನೀಡುತ್ತೇನೆ ಎಂದು ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯದ ಆಡಳಿತ ಭ್ರಷ್ಟಾಚಾರದಿಂದ ಹೊಲಸೆದ್ದಿರುವ, ದುರಾಡಾಳಿತದಿಂದ ದಿಕ್ಕುತಪ್ಪಿರುವ ಮತ್ತು ಆಂತರಿಕ ಕಚ್ಚಾಟದಿಂದ ನಲುಗಿ ಹೋಗಿರುವ ಸಂದರ್ಭದಲ್ಲಿ ಸ್ನೇಹಿತ ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ. ಅವರಿಗೆ ಯಶಸ್ಸನ್ನು ಕೋರುತ್ತೇನೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಸಹಕಾರದ ಭರವಸೆ ನೀಡುತ್ತೇನೆ ಎಂದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..