ದೊಡ್ಡಬಳ್ಳಾಪುರ: ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಪೂರೈಸುವ ಸದುದ್ದೇಶದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಜಲ ಜೀವನ ಮಿಷನ್ ಅರೂಢಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲು ಚಿಂತಿಸಲಾಗುತ್ತಿದೆ ಎಂದು ಗ್ರಾಮಪಂಚಾಯಿತಿ ಅಧ್ಯಕ್ಷೆ ಜಯಮ್ಮಪ್ರಭು ತಿಳಿಸಿದರು.
ತಾಲೂಕಿನ ಆರೂಢಿ ಗ್ರಾಮಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಲ ಜೀವನ್ ಮಿಷನ್ ಕುರಿತಾದ ವಿಶೇಷ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೂರದರ್ಶಿತ್ವದ ಹಿನ್ನೆಲೆಯಲ್ಲಿ ಭವಿಷ್ಯದಲ್ಲಿ ಕುಡಿಯುವ ನೀರಿಗೆ ಅಭಾವ ಸೃಷ್ಟಿಯಾಗದಿರಲು ಈ ಯೋಜನೆ ಅನುಷ್ಠಾನಗೊಳಿಸುತ್ತಿದ್ದಾರೆ. ಈ ಯೋಜನೆಯಲ್ಲಿ ಶೇ. 5ರಿಂದ 10ರಷ್ಟು ಜನರ ತೆರಿಗೆ ಯೋಜನೆ ಕಷ್ಟಸಾಧ್ಯವೆನಿಸದು.
ನೀರಿನ ಕೊರತೆ ಇರುವುದರಿಂದ ನೀರು ಪೋಲಾಗುವುದನ್ನು ತಡೆದು, ಅಗತ್ಯ ಇರುವವರಿಗೆ ನೀರು ಪೂರೈಸಲು ಈ ಯೋಜನೆ ಸಹಕಾರಿಯಾಗಲಿದೆ. ಆದರೆ, ಪ್ರತಿ ವ್ಯಕ್ತಿಗೆ ಮೀಸಲಿಡಲಾಗಿರುವ 55 ಲೀಟರ್ ನೀರನ್ನು ಕನಿಷ್ಠ 65ಕ್ಕೆ ಹೆಚ್ಚಿಸುವುದು ಅಗತ್ಯವೆಂದರು.
ಐಎಸ್ ಎ ಮೇಲ್ವಿಚಾರಕ ನಟೇಶ್ ಬಾಬು ಅವರು, ಜಲ ಜೀವನ್ ಮಿಷನ್ ಯೋಜನೆಯ ಕುರಿತು ವಿವರಿಸಿದರು.
ಗ್ರಾಪಂ ಉಪಾಧ್ಯಕ್ಷೆ ಯಶೋಧಮ್ಮ, ಪಿಡಿಒ ಸೌಭಾಗ್ಯಮ್ಮ ಸೇರಿದಂತೆ ಗ್ರಾಪಂ ಸದಸ್ಯರು ಹಾಗೂ ಸಿಬ್ಬಂದಿ ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..