ಬೆಂ.ಗ್ರಾ.ಜಿಲ್ಲೆ: ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಡಾ|| ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಿಗೆ 2021-22 ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ 5 ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಹತ್ತಿರದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಡಾ|| ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ 2021ರ ಆಗಸ್ಟ್ 10ರೊಳಗೆ ಅರ್ಜಿ ಸಲ್ಲಿಸುವುದು.
2021ರ ಸೆಪ್ಟೆಂಬರ್ 16 ರಂದು ಬೆಳಿಗ್ಗೆ 11.00 ಗಂಟೆಯಿಂದ 1.00 ಗಂಟೆಯವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ.
ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ, ವಿದ್ಯಾರ್ಥಿಯ ಇತ್ತೀಚಿನ 1 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಮಗುವಿನ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿ, SATS ಸಂಖ್ಯೆ, ಮೊಬೈಲ್ ಸಂಖ್ಯೆ ಸಲ್ಲಿಸುವುದು.
ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ನಂ. 217, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110, ದೂ.ಸಂ.: 29787447, ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ತಾಲ್ಲೂಕು ದೂ.ಸಂ.: 27681784, ದೊಡ್ಡಬಳ್ಳಾಪುರ ತಾಲ್ಲೂಕು ದೂ.ಸಂ.: 27623681, ಹೊಸಕೋಟೆ ತಾಲ್ಲೂಕು ದೂ.ಸಂ.: 27931528, ನೆಲಮಂಗಲ ತಾಲ್ಲೂಕು ದೂ.ಸಂ.: 27723172 ಅನ್ನು ಸಂಪರ್ಕಿಸಬಹುದು.
ಪ್ರಾಂಶುಪಾಲರು, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ, ಬೊಮ್ಮವಾರ, ಮೊ.ಸಂ.: 8105526933, ಮೊರಾರ್ಜಿ ದೇಸಾಯಿ ವಸತಿ ಶಾಲೆ(ಪ.ವರ್ಗ), ಕುಂದಾಣ ಮೊ.ಸಂ.: 9743669283, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಚನ್ನರಾಯಪಟ್ಟಣ ಮೊ.ಸಂ.: 9902989639, ಶ್ರೀಮತಿ ಇಂದಿರಾಗಾAಧಿ ವಸತಿ ಶಾಲೆ, ಬೈರಾಪುರ ಮೊ.ಸಂ.: 9916582001, ಮೊರಾರ್ಜಿ ದೇಸಾಯಿ ವಸತಿ ಶಾಲೆ(ಹಿ.ವರ್ಗ) ಸೂಲಿಬೆಲೆ ಮೊ.ಸಂ.:9845574483, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಮಾಡೇಶ್ವರ ಮೊ.ಸಂ.: 9845308319, ಡಾ|| ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ, ಇಸ್ತೂರು ಮೊ.ಸಂ.:8495812105, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬಚ್ಚಹಳ್ಳಿ ಮೊ.ಸಂ.: 7259613001, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಕೊಂಡ್ರಹಳ್ಳಿ ಮೊ.ಸಂ.9008419130, ಡಾ|| ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ, ಸೋಂಪುರ ಮೊ.ಸಂ.: 8495812105, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ತ್ಯಾಮಗೊಂಡ್ಲು ಮೊ.ಸಂ.: 7259882671 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕ ಕೃಷ್ಣಪ್ಪ.ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾ ಡಿ…..