ಚಿಕ್ಕಬಳ್ಳಾಪುರ: ಶಿವಮೊಗ್ಗ ಜಿಲ್ಲೆಯಲ್ಲಿ ಇತ್ತೀಚಿಗೆ ನಡೆದ ರಾಜ್ಯಮಟ್ಟದ ಕೂಡೋ ಪಂದ್ಯಾವಳಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಪ್ರತಿನಿಧಿಸಿ, ವಿವಿಧ ವಿಭಾಗಗಳಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆರ್.ಲತಾ ಅಭಿನಂದನೆ ಸಲ್ಲಿಸಿದರು.
ಜಿಲ್ಲಾಡಳಿತ ಭವನದ ತಮ್ಮ ಕಚೇರಿಯಲ್ಲಿ ಬುಧವಾರ ವಿಜೇತರಿಗೆ ಪ್ರಶಸ್ತಿ ಹಾಗೂ ಪ್ರಮಾಣಪತ್ರ ವಿತರಿಸುವ ಮೂಲಕ ಶುಭ ಕೋರಿದ ಅವರು, ಮುಂದಿನ ದಿನಗಳಲ್ಲಿ ಮತ್ತಷ್ಟು ಪದಕಗಳನ್ನು ಗೆಲ್ಲುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಉತ್ತುಂಗಕ್ಕೆ ಏರಿಸಬೇಕು ಎಂದು ಶುಭ ಕೋರಿದರು.
ಈ ಸಂದರ್ಭದಲ್ಲಿ ತರಬೇತುರಾರರು ಹಾಗೂ ಕರ್ನಾಟಕ ರಾಜ್ಯ ಕೂಡೋ ಸಂಸ್ಥೆಯ ಕಾರ್ಯದರ್ಶಿ ಮಹಮ್ಮದ್ ಜಭೀವುಲ್ಲಾ, ಕರ್ನಾಟಕ ಅಹಿಂದ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಎ.ಕೃಷ್ಣಚಾರಿ, ಮುಖಂಡರಾದ ಇಬ್ರಾಹಿಂ, ಮುದ್ದುಕೃಷ್ಣ, ಟಿ.ಟಿ.ನರಸಿಂಹಪ್ಪ, ಯುವ ಮುಖಂಡ ಮಂಜುನಾಥ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ರಾಷ್ಟ್ರಮಟ್ಟಕ್ಕೆ ಆಯ್ಕೆಯಾದವರು: 14 ವರ್ಷದೊಳಗಿನ ವಿಭಾಗದಲ್ಲಿ ಟಿ.ಎನ್.ಹೇಮಂತ್(-45ಕೆಜಿ), ಬಿ.ಲಲನ(+45), ಬಿ.ಶರಣ್ಯ(33ಕೆಜಿ), ಅಮೋಘ ವೈ(46ಕೆಜಿ), ಎಸ್.ಧನುಷ್ಮಿತ (18ಕೆಜಿ), ವಿ.ಎಸ್.ಆಧ್ಯ (21ಕೆಜಿ), ದ್ರುವಸಾಯಿ (27ಕೆಜಿ), ಎಂ.ಡಿ.ರಯಾನ್ (24ಕೆಜಿ), ಎಸ್.ವೇದಾಂತ (15ಕೆಜಿ), ಆಶ್ರ ಆಫ್ರಿನ್ (18ಕೆಜಿ).
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..