ಬೆಂ.ಗ್ರಾ.ಜಿಲ್ಲೆ: ತೋಟಗಾರಿಕೆ ಇಲಾಖೆಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಕಾರ್ಯಕ್ರಮಗಳಾದ ಹೊಸ ಪ್ರದೇಶ ವಿಸ್ತರಣೆ, ಪ್ರಮುಖ ತೋಟಗಾರಿಕೆ ಬೆಳೆಗಳ ಪುನಃಶ್ಚೇತನ, ಸಾರ್ವಜನಿಕ ಸ್ಥಳಗಳಲ್ಲಿ ಪೌಷ್ಠಿಕ ತೋಟಗಳ ನಿರ್ಮಾಣ, ಹಾಗೂ ವೈಯಕ್ತಿಕ ಪೌಷ್ಠಿಕ ತೋಟಗಳ ನಿರ್ಮಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಣ್ಣ ಮತ್ತು ಅತಿ ಸಣ್ಣ ರೈತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಬಡತನ ರೇಖೆಗಿಂತ ಕೆಳಗೆ ಇರುವ ರೈತರು ಹಾಗೂ ಜಾಬ್ ಕಾರ್ಡ್ ಹೊಂದಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಉತ್ತಮ ಅವಕಾಶವಿದ್ದು, ರೈತರು ತಮ್ಮ ಸ್ವಂತ ಜಮೀನಿನಲ್ಲಿ ದುಡಿಮೆ ಮಾಡಿ ಹೊಸ ತೋಟ ಅಭಿವೃದ್ಧಿಪಡಿಸಿಕೊಳ್ಳುವುದರ ಜೊತೆಗೆ ಸರ್ಕಾರದಿಂದ ಕೂಲಿ ವೇತನ ಪಡೆಯಲು ಉತ್ತಮ ಅವಕಾಶವಿದೆ.
ಪ್ರತಿ ಮಾನವ ದಿನಕ್ಕೆ ರೂ.289/-ರಂತೆ ಗಂಡು ಮತ್ತು ಹೆಣ್ಣು ಕೂಲಿಗಳಿಗೆ ಸಮಾನ ವೇತನ, ಪ್ರತಿ ಕುಟುಂಬಕ್ಕೆ ಗರಿಷ್ಠ 100 ದಿನಗಳವರೆಗೆ ಉದ್ಯೋಗ ಒದಗಿಸಬಹುದಾಗಿರುತ್ತದೆ. ಈ ಯೋಜನೆಯಡಿಯಲ್ಲಿ
ಒಬ್ಬ ವೈಯಕ್ತಿಕ ಫಲಾನುಭವಿ ಗರಿಷ್ಠ ರೂ. 2.50 ಲಕ್ಷಗಳವರೆಗೆ ಸಹಾಯಧನ ಪಡೆಯಲು ಅವಕಾಶವಿದೆ.ಕಾರ್ಯಕ್ರಮಗಳ ವಿವರ, ಅರ್ಹತೆಗಳು ವಿವರಗಳಿಗಾಗಿ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ತಾಂತ್ರಿಕ ಅಧಿಕಾರಿಗಳನ್ನು ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗಾಗಿ ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ(ಜಿ.ಪಂ.) ಪಿ.ಮಂಜುಳಾ(ಮೊ.ಸಂ.:9448825101), ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿ.ಪಂ.) ಎಂ. ಶ್ರೀನಿವಾಸ್ ಮೊ.ಸಂ.: 9632410677, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿ.ಪಂ) ಆರ್.ಪ್ರಶಾಂತ್ ಮೊ.ಸಂ.: 9538953949, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿ.ಪಂ), ಸುಬ್ರಮಣ್ಯ.ಜೆ.ವಿ. ಮೊ.ಸಂ.: 9901754339 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು(ಜಿಪಂ) ಮಾಹಾಂತೇಶ ಮುರಗೋಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..
 
				 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						