ದೊಡ್ಡಬಳ್ಳಾಪುರ: ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮೇಲೆ ಗುರುವಾರ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಮುತ್ಯಾಲನಗರದ ನಿವಾಸದ ಎದುರು ದುಷ್ಕೃತ್ಯ ಸಂಭವಿಸಿದ್ದು, ಹಲ್ಲೆಕೋರರು ದಾಳಿ ಮಾಡುತ್ತಿದ್ದಂತೆಯೇ ಎಚ್ಚೆತ್ತ ಶಶಿಕುಮಾರ್ ತಮ್ಮ ಬಳಿ ಇದ್ದ ಪರವಾನಗಿ ಹೊಂದಿದ ಗನ್ ತೆಗೆದು ತೋರಿಸಿದ್ದರಿಂದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಘಟನೆ ಕಾರಣರಾದ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಬೇಕೆಂದು ದೊಡ್ಡಬಳ್ಳಾಪುರ ತಾಲೂಕು ಖಾಸಗಿ ಶಾಲೆ ಆಡಳಿತ ಮಂಡಳಿ ಒಕ್ಕೂಟದಿಂದ ಇಂದು (ಶುಕ್ರವಾರ) ಆನ್ಲೈನ್ ತರಗತಿಗಳನ್ನು ರದ್ದು ಮಾಡಿ ಒತ್ತಾಯಿಸಲಾಗುತ್ತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..
 
				 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						