ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಎಚ್.ಬಂಗಾರಪ್ಪ ಪುತ್ರ, ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ಅವರು, ಇಂದು ಅಧಿಕೃತವಾಗಿ ಕಾಂಗ್ರೆಸ್’ಗೆ ಸೇರ್ಪಡೆಗೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಕರ್ನಾಟಕ ಕಾಂಗ್ರೆಸ್ ವಿಭಾಗ ಮಟ್ಟದ ಸಭೆ ನಡೆಯಿತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮುಂತಾದ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಇದೇ ಸಭೆಯಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಗರ ಜೊತೆ ಸೇರ್ಪಡೆಯಾದರು. ಕಾಂಗ್ರೆಸ್ ಬಾವುಟವನ್ನು ನೀಡುವ ಮೂಲಕ ನಾಯಕರು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..
 
				 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						