ದೊಡ್ಡಬಳ್ಳಾಪುರ: ಶಿಕ್ಷಕ ನಾಗೇಶ್ ಅವರ ಅಕಾಲಿಕ ಸಾವಿನಿಂದ ತೆರವಾಗಿದ್ದ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸ್ಥಾನಕ್ಕೆ ಸಿ.ಕೆ.ಮುತ್ತರಾಜು ಆಯ್ಕೆಯಾಗಿದ್ದಾರೆ.
ಗುರುಭವನದಲ್ಲಿ ಕಾರ್ಯಕಾರಿ ಸಮಿತಿ ಸಭೆ ಸೇರಿ, ಸರ್ವಸಮ್ಮತ ಶಿಕ್ಷಕ ಪ್ರತಿನಿಧಿಯಾಗಿ ಕೋಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಿ.ಕೆ.ಮುತ್ತರಾಜು ಅವರನ್ನು ಆಯ್ಕೆ ಮಾಡಲಾಯಿತು.
ಆಯ್ಕೆಯಾದ ಶಿಕ್ಷಕ ಪ್ರತಿನಿಧಿಗೆ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಜೈಕುಮಾರ್, ಹಾಗೂ ಪ್ರಧಾನ ಕಾರ್ಯದರ್ಶಿ ಎಸ್.ವಿ.ವಸಂತ ಗೌಡ ಆಯ್ಕೆ ಪ್ರಮಾಣ ಪತ್ರವನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ಎಸ್ ಮಂಜುನಾಥ್, ಖಜಾಂಚಿ ಕೆ.ಆರ್.ನರಸಿಂಹಮೂರ್ತಿ, ಉಪಾಧ್ಯಕ್ಷ ಎ.ವಿ.ಚಂದ್ರಪ್ಪ, ಜಿಲ್ಲಾ ಖಜಾಂಚಿ ಕೆ.ಎಚ್.ಬಸವಲಿಂಗಯ್ಯ, ಉಪಾಧ್ಯಕ್ಷೆ ಶಾಂತಮ್ಮ, ಸಹ ಕಾರ್ಯದರ್ಶಿ ಮಂಜುಳಾ, ತಾಲ್ಲೂಕು ಸಂಘಟನಾ ಕಾರ್ಯದರ್ಶಿ ಟಿ.ಎ.ಜ್ಯೋತಿ,ಸಹಕಾರ್ಯದರ್ಶಿ ಅಮ್ಜದ್ ಖಾನ್, ಸದಸ್ಯ ಎಂ.ಕೇಶವಮೂರ್ತಿ ಹಾಗೂ ತಾಲ್ಲೂಕು ನಾಮಿನಿ ಸದಸ್ಯರುಗಳು ಹಾಗೂ ಶಿಕ್ಷಕರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..