ಬೆಂ.ಗ್ರಾ.ಜಿಲ್ಲೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ 1ನೇ ತರಗತಿಯಿಂದ ಉನ್ನತ ಶಿಕ್ಷಣದವರೆಗಿನ ವಿಕಲಚೇತನ ವಿದ್ಯಾರ್ಥಿಗಳಿಗೆ “ವಿದ್ಯಾರ್ಥಿ ವೇತನ” ಮತ್ತು ತತ್ಸಮಾನ ವರ್ಷದ ಪಬ್ಲಿಕ್ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ “ಪ್ರೋತ್ಸಾಹಧನ” ಯೋಜನೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಗಾಗಿ ತಮ್ಮ ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ., ತಾಲ್ಲೂಕು ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ. ಹಾಗೂ ಜಿಲ್ಲಾ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿ ಸಲ್ಲಿಸುವುದು.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ, ನಂ.03, ನೆಲಮಹಡಿ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಹಾಗೂ ವಿಕಲಚೇತನರ ಸಹಾಯವಾಣಿ ದೂ.ಸಂ.: 080-29787441 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..