ಬೆಂ.ಗ್ರಾ.ಜಿಲ್ಲೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ವಿವಾಹ ಪ್ರೋತ್ಸಾಹಧನ” ಯೋಜನೆಯಡಿ” ಪ್ರೋತ್ಸಾಹಧನಕ್ಕಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ವಿಕಲಚೇತನ ವ್ಯಕ್ತಿಯು(ಯುವಕ/ಯುವತಿ) ಸಾಮಾನ್ಯ ವ್ಯಕ್ತಿಯೊಡನೆ ಮದುವೆಯಾದಲ್ಲಿ ರೂ.50,000/- ಗಳನ್ನು 5 ವರ್ಷಗಳವರೆಗೆ ಹೂಡಿಕೆ ರೂಪದಲ್ಲಿ ನೀಡಲಾಗುವುದು.
ಆಸಕ್ತರು ಅರ್ಜಿ ನಮೂನೆಗಾಗಿ, ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳ ವಿವರ ಹಾಗೂ ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ., ತಾಲ್ಲೂಕು ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ ಅಥವಾ ವಿಕಲಚೇತನರ ಸಹಾಯವಾಣಿ: 080-29787441 ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಜಿಲ್ಲಾಡಳಿತ ಭವನ, ನಂ. 03, ನೆಲಮಹಡಿ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..