ದೊಡ್ಡಬಳ್ಳಾಪುರ: ಗ್ರಾಮಪಂಚಾಯಿತಿ ವ್ಯಾಪ್ತಿಯ ಜನರಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳಿಗೆ ಯಾವುದೇ ಕೊರತೆಯಾಗದಂತೆ ಕಾರ್ಯ ನಿರ್ವಹಿಸುವುದು ನನ್ನ ಮೊದಲ ಆಧ್ಯತೆಯಾಗಿದೆ ಎಂದು ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ನೂತನ ಅಧ್ಯಕ್ಷ ಸಂದೇಶ್ ತಿಳಿಸಿದ್ದಾರೆ.
ತಾಲೂಕಿನ ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಅವರು, ಚುನಾವಣಾಧಿಕಾರಿ ದ್ರಾಕ್ಷಾಯಿಣಿ ಅವರಿಂದ ಆಯ್ಕೆ ಪತ್ರ ಸ್ವೀಕರಿಸಿ ಅವರು ಮಾತನಾಡಿದರು.
ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸಲು ಗ್ರಾಮಪಂಚಾಯಿತಿಗಳ ಪಾತ್ರ ಅಪಾರವಾಗಿದೆ, ಈ ನಿಟ್ಟಿನಲ್ಲಿ ಕೈಗೊಳ್ಳಬೇಕಾ ಕಾರ್ಯಗಳ ಕುರಿತು ಗ್ರಾಮಪಂಚಾಯಿತಿ ಸದಸ್ಯರೊಂದಿಗೆ ಚರ್ಚಿಸಿ ಕಾರ್ಯಾರಂಭ ಮಾಡಲಾಗುವುದೆಂದರು.
ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಅಭಿವೃದ್ಧಿ ಪಥದಲ್ಲಿದ್ದು, ಮತ್ತಷ್ಟು ನೂತನ ಯೋಜನೆಗಳನ್ನು ರೂಪಿಸಿ ಸ್ಥಳೀಯವಾಗಿ ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
ಮೊದಲ ಸಲ ಸದಸ್ಯನಾದವನಿಗೆ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿದ ಗ್ರಾಪಂ ಸದಸ್ಯರು, ನನ್ನ ಮೇಲೆ ವಿಶ್ವಾಸವಿಟ್ಟು ದೈರ್ಯ ತುಂಬಿದ ಶಾಸಕ ಟಿ.ವೆಂಕಟರಮಣಯ್ಯ, ಬಮೂಲ್ ನಿರ್ದೇಶಕ ಬಿ.ಸಿ.ಆನಂದ್, ಹಿರಿಯ ಮುಖಂಡರಾದ ತಿ.ರಂಗರಾಜು, ಬಿ.ಹೆಚ್.ಕೆಂಪಣ್ಣ ಅವರ ಬೆಂಬಲ ಅಪಾರ ಎಂದರು.
ಈ ಸಂದರ್ಭದಲ್ಲಿ ಪಿಡಿಒ ಪ್ರಕಾಶ್, ನೂತನ ಉಪಾಧ್ಯಕ್ಷೆ ಲಕ್ಷ್ಮೀ, ಬಮೂಲ್ ನಿರ್ದೇಶಕ ಬಿ.ಸಿ.ಆನಂದ್, ಹಿರಿಯ ಮುಖಂಡರಾದ ತಿ.ರಂಗರಾಜು, ಬಿ.ಹೆಚ್.ಕೆಂಪಣ್ಣ ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..