ದೊಡ್ಡಬಳ್ಳಾಪುರ: ಕೋವಿಡ್ ಸಂದರ್ಭದಲ್ಲಿ ಉಸಿರಾಟದ ತೊಂದರೆಯಿಂದಾಗಿ ನೂರಾರು ಜನ ಮೃತಪಟ್ಟ ನಂತರ ಪರಿಸರ ಸಂರಕ್ಷಣೆ ಕುರಿತಂತೆ ಜನರಲ್ಲಿ ಸಾಕಷ್ಟು ಜಾಗೃತಿ ಮೂಡಿದೆ ಎಂದು ದೊಡ್ಡಬೆಳವಂಗಲ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ವಿ.ಗಜೇಂದ್ರ ಹೇಳಿದರು.
ದೊಡ್ಡಬೆಳವಂಗಲದಲ್ಲಿ ಆಯೋಜಿಸಿದ್ದ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮಗಳಲ್ಲಿನ ರಸ್ತೆ ಬದಿಗಳಲ್ಲಿ ಸಸಿಗಳನ್ನು ನೆಟ್ಟು ಪೋಷಣೆ ಮಾಡುವುದರಿಂದ ಬೇಸಿಗೆಯಲ್ಲಿ ದಾರಿಯಲ್ಲಿ ನಡೆದು ಹೋಗುವವರಿಗೆ ನೆರಳನ್ನು ನೀಡುವುದರ ಜೊತೆಗೆ ಒಳ್ಳೆಯ ಗಾಳಿಯು ದೊರೆಯಲು ಸಹಕಾರಿಯಾಗಲಿದೆ. ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡರೆ ಗ್ರಾಮಗಳಲ್ಲಿ ಹಲವಾರು ಮೂಲ ಭೂತ ಸೌಲಭ್ಯಗಳನ್ನು ಕಲ್ಪಿಸಿಕೊಳ್ಳಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿ ಚುನಾಯಿತರು ಹಾಗೂ ಸಿಬ್ಬಂದಿಗಳು ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..