ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಪರಿಷತ್ತಿನ 5 ವರ್ಷಗಳ ಅವಧಿ ಮುಗಿದು ಚುನಾವಣೆ ಘೋಷಣೆಯಾಗಿದ್ದರೂ, ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರು ಜಿಲ್ಲೆಯಲ್ಲಿ ಪರಿಷತ್ಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡುತ್ತಿರುವುದು ನಿಯಮಬಾಹಿರವಾಗಿದೆ. ರಾಜ್ಯಾಧ್ಯಕ್ಷರು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕಿದೆ ಎಂದು ಹಿರಿಯ ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ಕಳೆದ ಮಾ.5 ರಂದು ಕನ್ನಡ ಸಾಹಿತ್ಯ ಪರಿಷತ್ತಿನ 5 ವರ್ಷಗಳ ಅವಧಿ ಮುಗಿದು, ಎಲ್ಲಾ ಸ್ಥಾನಗಳಿಗೂ ಚುನಾವಣೆ ಘೋಷಣೆಯಾಗಿದೆ. ಎಲ್ಲಾ ಪದಾಧಿಕಾರಿಗಳು ಸೆಪ್ಟಂಬರ್ವರೆಗೆ ಹಂಗಾಮಿಯಾಗಿ ಮುಂದುವರೆಯಲು ಬೈಲಾ ರೂಪಿಸಿದ್ದು, ಈ ಅವಧಿಯಲ್ಲಿ ತುರ್ತು ಕೆಲಸಗಳಿಗೆ ಆದ್ಯತೆ ನೀಡಲು ರಾಜ್ಯಾಧ್ಯಕ್ಷರಿಗೆ ಸೂಚಿಸಲಾಗಿದೆ. ಆದರೆ ಚುನಾವಣೆ ಘೋಷಣೆ ಆಗಿದ್ದರೂ 37 ದಿನಕ್ಕೆ ಮಾತ್ರ ದೇವನಹಳ್ಳಿ ತಾಲ್ಲೂಕು ಅಧ್ಯಕ್ಷರು, ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರದ ವಿವಿಧ ಹೋಬಳಿ ಅಧ್ಯಕ್ಷರು ಸೇರಿ 25ಕ್ಕೂ ಹೆಚ್ಚು ಪದಾಧಿಕಾರಿಗಳ ಪಟ್ಟಿಯನ್ನು ಜಿಲ್ಲಾಧ್ಯಕ್ಷರು ಬಿಡುಗಡೆ ಮಾಡಿ ನೇಮಕಾತಿ ಪತ್ರ ನೀಡಿದ್ದಾರೆ.
ಈ ಪಟ್ಟಿ ನಿಯಮಬಾಹಿರವಾಗಿದೆ. ಇದು ಚುನಾವಣಾ ಗಿಮಿಕ್ ಆಗಿದ್ದು, ಕನ್ನಡ ಸಾಹಿತ್ಯ ಪರಿಷತ್ ನಿಂದ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಅಧ್ಯಕ್ಷ ಮನುಬಳಿಗಾರ್ ಹಾಗೂ ಕನ್ನಡ ಸಾಹಿತ್ಯ ಪರಿಷ್ ಚುನಾವಣಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಪ್ರಭುದೇವ್ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……