ದೊಡ್ಡಬಳ್ಳಾಪುರ: ಇಂದಿನ ಜಾಗತಿಕ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳು ಸಜ್ಜಾಗಬೇಕಿದ್ದು, ತಂತ್ರಜ್ಞಾನದ ಆವಿಷ್ಕಾರಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಡಾ.ಶಿವಕುಮಾರ್ ತಿಳಿಸಿದರು.
ನಗರದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಇಂದು ವಿಜ್ಞಾನ ಮುನ್ನಡೆ ಸಾಸುತ್ತಿದ್ದು, ಹಲವಾರು ಸಂಶೋಧನೆಗಳು ನಡೆಯುತ್ತಿವೆ. ಪದವಿ ಪಡೆದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಹೊಣೆಗಾರಿಕೆ ಹೆಚ್ಚಿದ್ದು, ವಿಜ್ಞಾನದ ಮಹತ್ವವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಕಾರ್ಯೋನ್ಮುಖವಾಗಬೇಕಿದೆ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಅರ್.ಎಲ್.ಜಾಲಪ್ಪ ಸಮೂಹ ಸಂಸ್ಥೆಗಳ ನಿರ್ದೇಶಕ ಜೆ.ರಾಜೇಂದ್ರ, ಕಾಲೇಜಿನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಬಾಬುರೆಡ್ಡಿ, ಪ್ರಾಂಶುಪಾಲರಾದ ಡಾ.ಎಂ.ಶ್ರೀನಿವಾಸರೆಡ್ಡಿ, ಉಪಪ್ರಾಂಶುಪಾಲರಾದ ಡಾ. ಶಿವಪ್ರಸಾದ್, ಸ್ಟೂಡೆಂಟ್ ವೆಲ್ಫೆರ್ ಆಫೀಸರ್ ಡಾ.ಕೆ.ಸುನಿಲ್ ಕುಮಾರ್ ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……