ದೊಡ್ಡಬಳ್ಳಾಪುರ: ತಾಲೂಕು ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಗೌರವ ಅಧ್ಯಕ್ಷರಾಗಿದ್ದ ಸಂಜೀವ್ ಕುಮಾರ್ (ಪಾಪಣ್ಣ) (63 ವರ್ಷ) ಭಾನುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಹಾಗೂ ಒಬ್ಬ ಪುತ್ರರನ್ನು ಅಗಲಿದ್ದಾರೆ.
ಕನ್ನಡ ಅಭಿಮಾನಿಯಾಗಿದ್ದ ಪಾಪಣ್ಣ ಅವರು ಗೋಕಾಕ್ ಚಳವಳಿ ಸೇರಿದಂತೆ ಹಲವಾರು ಕನ್ನಡ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು, ಪಾಪಣ್ಣ ಅವರಿಗೆ ತಾಲೂಕು ಆಡಳಿತದಿಂದ ಕನ್ನಡ ಕಟ್ಟಾಳು ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ಮೃತರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ ನಗರದ ಹೊರವಲಯದ ಮುಕ್ತಿ ಧಾಮದಲ್ಲಿ ನೆರವೇರಿತು.
ಪಾಪಣ್ಣ ಅವರ ನಿಧನಕ್ಕೆ ತಾಲೂಕು ರಾಜ್ ಕುಮಾರ್ ಅಭಿಮಾನಿಗಳ ಸಂಘ, ತಾಲೂಕು ಕನ್ನಡ ಪಕ್ಷ ಹಾಗೂ ಕನ್ನಡ ಸಂಘಟನೆಗಳ ಒಕ್ಕೂಟದ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……