ಬೆಂ.ಗ್ರಾ.ಜಿಲ್ಲೆ: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಇವರು ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ 2021ರ ಆಗಸ್ಟ್ 07 ರಂದು ಒಂದು ದಿನದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು.
ಅಭ್ಯರ್ಥಿಗಳು 18 ವರ್ಷದಿಂದ 45 ವರ್ಷ ವಯಸ್ಸಿನವರಾಗಿರಬೇಕು. ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು 2021ರ ಆಗಸ್ಟ್ 06 ಕೊನೆಯ ದಿನವಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ 132, ಜಿಲ್ಲಾಡಳಿತ ಭವನ, ಚಪ್ಪರದಕಲ್ಲು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಬೆಂಗಳೂರು ದೂ.ಸಂ.: 7760816038 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……