ದೊಡ್ಡಬಳ್ಳಾಪುರ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾಯ ದತ್ತಿ ಇಲಾಖೆ ವತಿಯಿಂದ ತಾಲೂಕಿನ ಘಾಟಿ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆಗಸ್ಟ್ 13 ಮತ್ತು ಸೆಪ್ಟೆಂಬರ್ 13ರಂದು ನಡೆಸಲು ಉದ್ದೇಶಿಸಿದ್ದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನ ಮತ್ತೆ ಮುಂದೂಡಲಾಗಿದೆ.
ಕೋವಿಡ್ ಮೂರನೆ ಅಲೆಯ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮುಂದೂಡುವಂತೆ ಸೂಚಿಸಿ ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್ ಘಾಟಿ ಸುಬ್ರಹ್ಮಣ್ಯ ದೇವಾಲಯದ ಇಒ ಅವರಿಗೆ ಪತ್ರ ಬರೆದಿದ್ದಾರೆ.
ಕೋವಿಡ್ ಹಿನ್ನೆಲೆ ಮುಂದೂಡಲಾಗಿದ್ದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಗಸ್ಟ್ 13 ಮತ್ತು ಸೆಪ್ಟೆಂಬರ್ 13ರಂದು ನಡೆಸಲು ಉದ್ದೇಶಿಸಿಲಾಗಿತ್ತು.
ಈ ಕುರಿತು ಈಗಾಗಲೆ 29 ಅರ್ಜಿಗಳು ಬಂದಿದ್ದು, 27 ಅರ್ಜಿಗಳು ವಿವಾಹಕ್ಕೆ ಅರ್ಹವಾಗಿದ್ದವು. ಆದರೆ ಕೋವಿಡ್-19 ಮೂರನೇ ಅಲೇ ಹೆಚ್ಚಾಗುತ್ತಿರುವುದರಿಂದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಅವಕಾಶ ನೀಡಿದಲ್ಲಿ ಕೋವಿಡ್-19 ನಿಯಮ ಉಲ್ಲಂಘನೆಯಾಗಿಗುವ ಸಂಭವವಿರುವ ಕಾರಣ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಸೂಚಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..