ಬೆಂ.ಗ್ರಾ.ಜಿಲ್ಲೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ 317ಎಫ್ ಇವರ ಸಂಯುಕ್ತಾಶ್ರಯದಲ್ಲಿ ಕನ್ನಡ ಬಾರದವರಿಗೆ, ಅನ್ಯ ಭಾಷಿಕರಿಗೆ “ಕನ್ನಡ ಕಲಿಯಿರಿ-ಕಲಿಸಿರಿ” ಎಂಬ ಕಾರ್ಯಕ್ರಮವನ್ನು 2021ರ ಆಗಸ್ಟ್ 04ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಾರಂಭಿಸಲಾಗುತ್ತಿದೆ.
ಈ ವಿನೂತನ ವರ್ಚುಯಲ್ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಉದ್ಘಾಟಿಸಲಿದ್ದು, “ಕನ್ನಡ ಕಲಿಯಿರಿ-ಕಲಿಸಿರಿ” ಎಂಬ ಪುಸ್ತಕವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಅವರು ಬಿಡುಗಡೆಗೊಳಿಸಲಿದ್ದಾರೆ ಹಾಗೂ ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಲಯನ್ಸ್ 317ಎಫ್ ನ ಜಿಲ್ಲಾ ರಾಜ್ಯಪಾಲರಾದ ಲಯನ್ ಮನೋಹರನ್ ನಂಬಿಯಾರ್, ಎಂಜೆಎಫ್ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕ ಮಂಜುನಾಥ ಆರಾಧ್ಯ, ಲಯನ್ಸ್ ಕ್ಲಬ್ ಸಂಸ್ಥೆಯ ಜಿಲ್ಲಾ ಸಂಚಾಲಕರು ಲಯನ್ ಆರ್.ಕೆ.ಹೆಗ್ಗಡೆ, ಜಿಲ್ಲಾ ಸಮಿತಿ ಸದಸ್ಯರಾದ ಲಯನ್ ಡಾ.ಹುಲಿಕಲ್ ನಟರಾಜ್, ಲಯನ್ ಭಾಗ್ಯಮ್ಮ ಭಾಗವಹಿಸಲಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..