ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಯುವಕರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಕೊಡಿಗೇಹಳ್ಳಿ ಬಸ್ ನಿಲ್ದಾಣದಲ್ಲಿ ಸಂಭವಿಸಿದೆ.
ಮಂಗಳವಾರ ರಾತ್ರಿ ದೊಡ್ಡಬೆಳವಂಗಲ ಕಡೆಯಿಂದ ಬಂದ ಕಾರು ನಿಯಂತ್ರಣ ತಪ್ಪಿದ್ದು, ಕೊಡಿಗೇಹಳ್ಳಿ ಬಸ್ ನಿಲ್ದಾಣದ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ, ಆರೂಢಿ ಮೂಲದ ನಿರಂಜನ್ (23 ವರ್ಷ), ಕಾರ್ತಿಕ್ (20ವರ್ಷ) ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ಹರಿತಲೇಖನಿಗೆ ತಿಳಿಸಿವೆ.
ಅಪಘಾತದ ನಂತರ ಲಾರಿಯೊಂದಿಗೆ ಚಾಲಕ ಪರಾರಿಯಾಗಿದ್ದು, ಗಾಯಗೊಂಡವರನ್ನು ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..