ದೊಡ್ಡಬಳ್ಳಾಪುರ: ಸಿಬಿಎಸ್‌ಇ ಪಠ್ಯಕ್ರಮದ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಎಂ.ಎಸ್.ವಿ ಪಬ್ಲಿಕ್ ಶಾಲೆ ಶೇ.100ರಷ್ಟು ಫಲಿತಾಂಶ ಪಡೆದಿದೆ.
ಮಂಗಳವಾರ ಬಿಡುಗಡೆಯಾದ ಫಲಿತಾಂಶದಲ್ಲಿ ಎಂ.ಎಸ್.ವಿ ಪಬ್ಲಿಕ್ ಶಾಲೆಯು ಸತತ 10ನೇ ಬಾರಿಯೂ ಶೇ.100 ಫಲಿತಾಂಶಗಳಿಸಿದೆ.
ಈ ಬಾರಿ ಒಟ್ಟು 63 ವಿದ್ಯಾರ್ಥಿಗಳಲ್ಲಿ 38 ಮಕ್ಕಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, 21 ಮಕ್ಕಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಇಬ್ಬರು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಈ ಫಲಿತಾಂಶಕ್ಕೆ ಮತ್ತು ವಿಧ್ಯಾರ್ಥಿಗಳ ಸಾಧನೆಗೆ ಶಾಲೆಯ ಸಂಸ್ಥಾಪಕರಾದ ಎ.ಸುಬ್ರಮಣ್ಯ, ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ, ಪ್ರಾಂಶುಪಾಲರಾದ ನಾಗರತ್ನ.ಎನ್.ಪಾಲನ್ ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..