ಹಿಂದುಗಳ ಧಾರ್ಮಿಕ ಭಾವನೆಗೆ ದಕ್ಕೆ ತಂದ ಅಧಿಕಾರಿಗಳ ಅಮಾನತ್ತಿಗೆ ಹಿಂಜಾವೇ ಒತ್ತಾಯ

ಬೆಂಗಳೂರು: ದೇವಾಲಯ ತೆರವು ಸಂದರ್ಭದಲ್ಲಿ ಹಿಂದು ಧಾರ್ಮಿಕ ಭಾವನಗೆ ದಕ್ಕೆ ತಂದಿದ್ದಾರೆಂದು ಆರೋಪಕ್ಕೆ ಒಳಗಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಧಿಕಾರಿಗಳನ್ನು ಅಮಾನತ್ತು ಮಾಡಬೇಕೆಂದು ಹಿಂದು ಜಾಗರಣ ವೇದಿಕೆ ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದೆ.

ಘಟನೆಯ ವಿವರ: ಸೋಮವಾರ ಸಂಜೆ 6-30ರ ಸಮಯದಲ್ಲಿ ನೆಲಮಂಗಲ ನಗರದ  ರಾಜ್‍ಕುಮಾರ್ ವೃತ್ತದಲ್ಲಿರುವ ತಪಸ್ವಿ ವೀರಾಂಜನೇಯ ಸ್ವಾಮಿ ದೇವಸ್ಥಾನವನ್ನು ತಾಲ್ಲೂಕು ಆಡಳಿತ ಯಾವುದೇ ಮುನ್ಸೂಚನೆ ಅಥವಾ ನೋಟೀಸ್ ನೀಡದೆ ಏಕಾಏಕಿ ದೇವಸ್ಥಾನವನ್ನು ತೆರವುಗೊಳಿಸಿದೆ.

ದೇವಸ್ಥಾನವನ್ನು  ತೆರವುಗೊಳಿಸುವಾಗ ಸೂಕ್ತ ರೀತಿಯಲ್ಲಿ ತೆರವುಗೊಳಿಸಿ ಅಲ್ಲಿರುವ ವಿಗ್ರಹಗಳನ್ನು ಸೂಕ್ತ  ಧಾರ್ಮಿಕ  ರೀತಿಯಲ್ಲಿ ವಿಲೇವಾರಿ ಮಾಡಬೇಕೆಂದು ಸುಪ್ರೀಂ ಕೋರ್ಟ್ ಆದೇಶವಿದ್ದರೂ ಸಹ, ತಾಲ್ಲೂಕು ಆಡಳಿತ ಅದರಂತೆ ಕಾರ್ಯ ನಿರ್ವಹಿಸದೆ ಹಿಂದುಗಳ ಭಾವನೆಗೆ ಧಕ್ಕೆ ಬರುವಂತೆ ದೇವಸ್ಥಾನವನ್ನು ತೆರವುಗೊಳಿಸಿ ಮನಸ್ಸೋ ಇಚ್ಛೆ ದೇವಸ್ಥಾನವನ್ನು ಒಡೆದು ಹಾಕಿರುತ್ತಾರೆ. ಅಲ್ಲಿದ್ದ ತಪಸ್ವಿ ವೀರಾಂಜನೇಯಸ್ವಾಮಿಯ ವಿಗ್ರಹವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡದೆ ಕಸದ ರಾಶಿಯಲ್ಲಿ ಬಿಸಾಕಿರುವುದು ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎನ್ನುವುದು ಆರೋಪ‌ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಹಿಂದು ಜಾಗರಣ ವೇದಿಕೆವತಿಯಿಂದ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು, ಶೀಘ್ರವೇ ಕಸದ ರಾಶಿಯಲ್ಲಿ ಹಾಕಿರುವ ಆಂಜನೇಯನ ವಿಗ್ರಹವನ್ನು ಸೂಕ್ತ  ಧಾರ್ಮಿಕ ರೀತಿಯಲ್ಲಿ ಬೇರೆಡೆಗೆ ಸ್ಥಳಾಂತರಿಸಿ,  ಒಡೆದು ಹಾಕಿರುವ ದೇವಸ್ಥಾನವನ್ನು ಬೇರೆಡೆ ಮರು‌ ನಿರ್ಮಿಸಿ ಕೊಡಬೇಕು ಹಾಗೂ ಈ ರೀತಿ ದುರ್ವರ್ತನೆಯನ್ನು ತೋರಿದ ಅಧಿಕಾರಿಗಳನ್ನು‌ ಕೂಡಲೇ ಅಮಾನತುಗೊಳಿಸಬೇಕೆಂದು‌ ಒತ್ತಾಯಿಸಿದ್ದಾರೆ‌.

ಈ ಸಂಧರ್ಭದಲ್ಲಿ ಹಿಂದು ಜಾಗರಣ ವೇದಿಕೆ ಪ್ರಾಂತ ಕಾರ್ಯದರ್ಶಿ ಬಸವರಾಜು, ಬೆಂ.ಗ್ರಾ.ಕಾರ್ಯದರ್ಶಿ ಮಂಜುನಾಥ್, ಜಿಲ್ಲಾ ಪ್ರಚಾರ ಪ್ರಮುಖ್ ಹೇಮಂತ್ ಸೇರಿದಂತೆ ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ರಾಜ್ಯ ಬಿಜೆಪಿಯ ಹಿರಿಯ ಮುತ್ಸದ್ದಿ ಬಿ.ಎಸ್. ಯಡಿಯೂರಪ್ಪ (B.S. Yediyurappa) ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ. ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ

[ccc_my_favorite_select_button post_id="121304"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!