ಬೆಂ.ಗ್ರಾ.ಜಿಲ್ಲೆ: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಿಲ್ಲಾ ಕೌಶಲ್ಯ ಮಿಷನ್ ಅಡಿಯಲ್ಲಿ 2021ರ ಆಗಸ್ಟ್ 12 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ “ಜಿಲ್ಲಾ ಮಿನಿ ಉದ್ಯೋಗ ಮೇಳ”ವನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಬಹುದು.
ಎಸ್.ಎಸ್.ಎಲ್.ಸಿ., ಪಿಯುಸಿ, ಐ.ಟಿ.ಐ, ಡಿಪ್ಲೋಮಾ, ಎಂಜಿನಿಯರಿಂಗ್ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‍ಲೈನ್ ಮೂಲಕ https://forms.gle/skXd836McN1VRDm99 ಲಿಂಕ್‍ನಲ್ಲಿ ಇಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಮಿನಿ ಉದ್ಯೋಗಮೇಳದಲ್ಲಿ 25ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, 500ಕ್ಕೂ ಹೆಚ್ಚು ಉದ್ಯೋಗವಕಾಶಗಳಿವೆ.
ಉದ್ಯೋಗಮೇಳ ನಡೆಯುವ ಸ್ಥಳದಲ್ಲಿ ಮಾಸ್ಕ್ ಧರಿಸುವುದು ಹಾಗೂ ಪರಸ್ಪರ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಲಕ್ಷ್ಮೀ ನಾರಾಯಣ ರಾಜು ಮೊ.ಸಂ.: 9916852249, ಕಿರಣ್ ಮೊ.ಸಂ.: 99643556183, ದರ್ಶಿನಿ ಮೊ.ಸಂ.: 8970122219, ಸಾದಿಕ್ ಪಾಷ ಮೊ.ಸಂ.: 8618389432 ಹಾಗೂ ಇ-ಮೇಲ್: [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..