ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ / ವಿದ್ಯಾರ್ಥಿಗಳು ಗುರಿಯೆಡೆಗೆ ಗಮನಹರಿಸಬೇಕು: ಸಿ.ಎಸ್.ಷಡಾಕ್ಷರಿ

ಬೆಂ.ಗ್ರಾ.ಜಿಲ್ಲೆ:  ಉದ್ಯೋಗ ಕ್ಷೇತ್ರದಲ್ಲಿ ಸ್ಪರ್ಧಾತ್ಮಕತೆ ಹೆಚ್ಚಾಗಿದ್ದು, ವಿದ್ಯಾರ್ಥಿಗಳು ವಿಚಲಿತರಾಗದೆ, ಸಮಯ ವ್ಯರ್ಥ ಮಾಡದೆ, ತಮ್ಮ ಗುರಿಯೆಡೆಗೆ ಗಮನಹರಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ತಿಳಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ(ರಿ.), ಜಿಲ್ಲಾ ಶಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಸಭಾಂಗಣದಲ್ಲಿಂದು ನಡೆದ “2019-20ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇತರ ಜಿಲ್ಲೆಗಳಲ್ಲಿಯೂ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಹೊಸ ವಿಚಾರಗಳು, ಹೊಸ ಆಲೋಚನೆಗಳ ಮೂಲಕ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಸರ್ಕಾರಿ ನೌಕರರೆಲ್ಲರೂ ತಮ್ಮ ವೃತ್ತಿಯನ್ನು ಗೌರವಿಸುವ ಮೂಲಕ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ರಾಜ್ಯ ಸರ್ಕಾರ ಈಗಾಗಲೇ ನೌಕರರ ತುಟ್ಟಿಭತ್ಯೆ(ಡಿಎ) ಹೆಚ್ಚಳಗೊಳಿಸಿದ್ದು, ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಆರೋಗ್ಯ ಯೋಜನೆ ರೂಪಿಸಿದ್ದು, ಶೇ. 100 ರಷ್ಟು ಉಚಿತ ಚಿಕಿತ್ಸೆ ಲಭ್ಯವಾಗಲಿದೆ ಎಂದರು.

ಹೊಸ ಪಿಂಚಣಿ ಯೋಜನೆ(ಎನ್.ಪಿ.ಎಸ್.) ರದ್ದುಗೊಳಿಸಬೇಕು ಹಾಗೂ ಕೇಂದ್ರ ಮಾದರಿಯಲ್ಲಿ ವೇತನ ನೀಡಬೇಕು. ಬೆಂಗಳೂರು ನಗರದ ಸರ್ಕಾರಿ ನೌಕರರಿಗೆ ನೀಡುವ ತುಟ್ಟಿ ಭತ್ಯೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಗೂ ವಿಸ್ತರಣೆ ಮಾಡುವಂತೆ ಸರ್ಕಾರದ ಗಮನಕ್ಕೆ ತರಲಾಗಿದ್ದು, ಈ ಸಮಸ್ಯೆಗಳು ನಿವಾರಣೆಯಾಗಲಿವೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ಉನ್ನತ ಗುರಿಯನ್ನು ಹೊಂದಬೇಕು ಎಂದರಲ್ಲದೆ, ಪರಿಶ್ರಮದಿಂದ ತಮ್ಮ ಗುರಿಯನ್ನು ಸಾಧಿಸಲು ಪ್ರಯತ್ನಿಸುವುದರಿಂದ ಮುಂದಿನ ದಿನಗಳಲ್ಲಿ ಉನ್ನತ ಹುದ್ದೆಗಳನ್ನು ಪಡೆಯಬಹುದು ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಹಲವಾರು ಕಾರ್ಯಕ್ರಮಗಳನ್ನು ರಾಜ್ಯದಲ್ಲಿಯೇ ಮೊದಲ ಬಾರಿಗೆ ಆಯೋಜಿಸಿದ್ದೇವೆ. ವೈದ್ಯರ ನಡೆ ಹಳ್ಳಿ ಕಡೆ, ಮಕ್ಕಳ ತಜ್ಞರ ನಡೆ ಹಳ್ಳಿ ಕಡೆ, ದೇಶದಲ್ಲಿಯೇ ಕಡಿಮೆ ಅವಧಿಯಲ್ಲಿ ಮೊದಲ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಾಣ, ದೇಶದಲ್ಲಿಯೇ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಯಶಸ್ವಿ ಬ್ಲಾಕ್ ಫಂಗಸ್ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲಾ ಇಲಾಖೆಗಳು ಶ್ರಮಿಸಿದ್ದು, ಈಗಾಗಲೇ ಕೋವಿಡ್ ಮೂರನೇ ಅಲೆ ಪ್ರಾರಂಭವಾಗಿದ್ದು, ಪ್ರತಿಯೊಬ್ಬರು ಮುಂಜಾಗ್ರತಾ ಕ್ರಮವಾಗಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. 

ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್ ಅವರು ಮಾತನಾಡಿ, ದೇಶ ಕಟ್ಟುವಲ್ಲಿ ಯುವ ಜನತೆಯ ಪಾತ್ರ ಮಹತ್ತರವಾದದ್ದು, ವಿದ್ಯಾರ್ಥಿಗಳು ಉತ್ತಮ ಕನಸುಗಳನ್ನು ಕಾಣಬೇಕು ಹಾಗೂ ಅವುಗಳನ್ನು ನನಸು ಮಾಡಿಕೊಳ್ಳುವತ್ತ ಹೆಜ್ಜೆ ಹಾಕಬೇಕು ಎಂದರಲ್ಲದೆ, ತಂದೆ-ತಾಯಿಗಳು ಮಕ್ಕಳ ಮೇಲೆ ಒತ್ತಡ ಹೇರುವ ಬದಲು ಅವರಿಗೆ ಆಸಕ್ತಿ ಇರುವ ವಿಷಯದಲ್ಲಿ ಶಿಕ್ಷಣ ಪಡೆಯಲು ಅವಕಾಶ ನೀಡಬೇಕು ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಕುಮಾರ್ ಅವರು ಮಾತನಾಡಿ ಸರ್ಕಾರಿ ನೌಕರರ ಮಕ್ಕಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಶ್ಲಾಘನೀಯ ಎಂದರಲ್ಲದೆ, ಸರ್ಕಾರಿ ನೌಕರರು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

ಸಮಾರಂಭದಲ್ಲಿ 2019-20ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರ್ಕಾರಿ ನೌಕರರ ಮಕ್ಕಳನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಖಜಾಂಚಿ ಶ್ರೀನಿವಾಸ್, ಬೆಂಗಳೂರು ಗ್ರಾಮಾಂತರ ಜಿಲ್ಲೆ ಗೌರವಾಧ್ಯಕ್ಷ ಹಾಗೂ ಹೊಸಕೋಟೆ ತಾಲ್ಲೂಕು  ಅಧ್ಯಕ್ಷ ಆರ್.ಮುನಿಶಾಮಪ್ಪ, ದೇವನಹಳ್ಳಿ ತಾಲ್ಲೂಕು ಅಧ್ಯಕ್ಷ  ಹೆಚ್.ಬಾಲಕೃಷ್ಣ, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಎನ್. ಲಕ್ಷ್ಮೀನರಸಿಂಹಯ್ಯ, ನೆಲಮಂಗಲ ತಾಲ್ಲೂಕು ಅಧ್ಯಕ್ಷ ವಾಸುದೇವ ಮೂರ್ತಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಖೆ ಹಿರಿಯ ಉಪಾಧ್ಯಕ್ಷ ರವಿಶಂಕರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಖಜಾಂಚಿ ಮಹಮದ್ ಮುಜಾಮಿಲ್, ಪ್ರಧಾನ ಕಾರ್ಯದರ್ಶಿ ಪಿ.ಗಂಗಾಧರಪ್ಪ, ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಘದ ಪದಾಧಿಕಾರಿಗಳು, ಉಪಾಧ್ಯಕ್ಷರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ (Accident) ತಾಲೂಕಿನ ತಪಸೀಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="111050"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!