ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಶಾಲಾ-ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರ ಅಧ್ಯಕ್ಷತೆಯಲ್ಲಿ ಇಂದು ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ನಡೆದ ಸಭೆ ನಡೆಸಲಾಯಿತು.
ಸಭೆಯ ಮುಖ್ಯಾಂಶಗಳು:
1. ಗಡಿ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ತೀರ್ಮಾನ.
2. ಇತರ ಜಿಲ್ಲೆಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಕ್ರಮ ಕೈಗೊಳ್ಳಲು ತೀರ್ಮಾನ.
3. ಶಾಲೆಗಳನ್ನು ಎರಡು ಹಂತದಲ್ಲಿ ಪ್ರಾರಂಭಿಸಲಾಗುತ್ತಿದ್ದು, ಮೊದಲನೇ ಹಂತದಲ್ಲಿ ನಿಬಂಧನೆಗಳಿಗೊಳಪಟ್ಟಂತೆ, ಆಗಸ್ಟ್ 23 ರಿಂದ 9, 10 ಮತ್ತು ಪಿಯುಸಿ ತರಗತಿಯನ್ನು ಪ್ರಾರಂಭಿಸಲು ತೀರ್ಮಾನ; ಮಾರ್ಗಸೂಚಿಗಳ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಲಾಗುವುದು.
4. ಕೋವಿಡ್ ತೀವ್ರತೆ ನೋಡಿಕೊಂಡು ಆಗಸ್ಟ್ ತಿಂಗಳಾಂತ್ಯಕ್ಕೆ ಪ್ರಾಥಮಿಕ ಮತ್ತು ಪ್ರೌಢಶಾಲಾ ತರಗತಿ ಶಾಲೆ ಆರಂಭಿಸಲು ತೀರ್ಮಾನ ತೆಗೆದುಕೊಳ್ಳಲಾಗುವುದು
5. ರಾಜ್ಯದಲ್ಲಿ ರಾತ್ರಿ ಕರ್ಫ್ಯೂ (ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ) ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಸೂಚಿಸಲಾಯಿತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..