ಕೋವಿಡ್-19 ಮೂರನೇ ಅಲೆ ನಿಯಂತ್ರಣಕ್ಕೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಿ: ಸಚಿವ ಎನ್.ನಾಗರಾಜು

ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೋವಿಡ್-19 ಮೂರನೇ ಅಲೆ ಎದುರಾಗದಂತೆ ತಡೆಯಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೋವಿಡ್-19 ಹಾಗೂ ಪ್ರಕೃತಿ ವಿಕೋಪ ಉಸ್ತುವಾರಿ ಸಚಿವರಾದ  ಎನ್.ನಾಗರಾಜು (ಎಂ.ಟಿ.ಬಿ)ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿಂದು ನಡೆದ “ಕೋವಿಡ್-19 ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ವೈರಾಣು ರೋಗ ಹರಡದಂತೆ ಮುಂಜಾಗ್ರತಾ ಕ್ರಮ, ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್-19 ನಿಯಂತ್ರಣಕ್ಕೆ ಮುಖ್ಯಮಂತ್ರಿಗಳು ಈಗಾಗಲೇ ಅಗತ್ಯ ನಿರ್ದೇಶನಗಳನ್ನು ನೀಡಿದ್ದು, ಅಧಿಕಾರಿಗಳು ತಪ್ಪದೇ ಪಾಲಿಸಬೇಕು ಹಾಗೂ ಸಾರ್ವಜನಿಕರಿಂದ ಕೋವಿಡ್ ನಿಯಮಗಳು ಉಲ್ಲಂಘನೆಯಾಗದಂತೆ ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.

ಜನಸಂದಣಿ ಸ್ಥಳಗಳಾದ ಸಂತೆಗಳು, ಮದುವೆ, ಮಾರುಕಟ್ಟೆಗಳು,ಜಾತ್ರೆಗಳು, ಬ್ರಹ್ಮ ರಥೋತ್ಸವ, ಕರಗ ಮಹೋತ್ಸವ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಪ್ಪಿದಲ್ಲಿ, ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಪ್ರತಿ ತಾಲ್ಲೂಕಿನಲ್ಲಿ ತಹಶೀಲ್ದಾರ್ ಅವರ ನೇತೃತ್ವದಲ್ಲಿ ಸಭೆ ಕರೆದು ಆಯಾ ತಾಲ್ಲೂಕುಗಳಲ್ಲಿರುವ ದೇವಸ್ಥಾನ, ಮಸೀದಿ ಹಾಗೂ ಚರ್ಚ್ ಹಾಗೂ ಇತರೆ ಧರ್ಮದ ಪ್ರಾರ್ಥನಾ ಮಂದಿರದಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಬೇಕು ಹಾಗೂ ದೇವಾಲಯಗಳಲ್ಲಿ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಬೇಕು ಎಂದರು.

ಕೋವಿಡ್ ಸೋಂಕಿನ ಬಗ್ಗೆ ಸಾರ್ವಜನಿಕರು ನಿರ್ಲಕ್ಷ್ಯ ವಹಿಸದಂತೆ ಅರಿವು ಮೂಡಿಸುವುದು ಅತ್ಯವಶ್ಯಕ ಎಂದರಲ್ಲದೆ, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಇದುವರೆಗೂ 4.95 ಲಕ್ಷ ಲಸಿಕೆ ನೀಡಲಾಗಿದ್ದು, ಜಿಲ್ಲೆಗೆ ಹೆಚ್ಚಿನ ಕೋವಿಡ್ ಲಸಿಕೆಯನ್ನು ಪೂರೈಸುವಂತೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು. 

ಇತ್ತೀಚೆಗೆ ನೆಲಮಂಗಲ ತಾಲ್ಲೂಕಿನಲ್ಲಿ ಕೋವಿಡ್ ಸೋಂಕು ದೃಢಪಡುತ್ತಿರುವ ಪ್ರಮಾಣ ಶೇ. 3.1 ಅನ್ನು ತಲುಪಿದ್ದು, ತಾಲ್ಲೂಕು ವೈದ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಕೋವಿಡ್ ಸೋಂಕಿತ ಪ್ರಕರಣಗಳು ಹೆಚ್ಚಾದ ಸಂದರ್ಭದಲ್ಲಿ ಕಂಟೈನ್‌ಮೆಂಟ್ ವಲಯ, ಸೆಮಿ ಕಂಟೈನ್‌ಮೆಂಟ್ ವಲಯಗಳಾಗಿ ವಿಂಗಡಿಸಬೇಕು ಎಂದು ಸಲಹೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಯ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು, ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳು ಕಾರ್ಯ ನಿರ್ವಹಿಸಬೇಕು ಎಂದರು.

ಕುಡಿಯುವ ನೀರಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಲಾಗುವುದು ಎಂದ ಅವರು, ಅಕ್ರಮ ಗಣಿಗಾರಿಕೆ ನಡೆಯುವ ಸ್ಥಳಕ್ಕೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರು ಮಾತನಾಡಿ, ಕೋವಿಡ್ ಮೂರನೇ ಅಲೆ ಬರದಂತೆ ತಡೆಯಲು ಜಿಲ್ಲೆಯಲ್ಲಿ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕೈಗಾರಿಕಾ ಕೇಂದ್ರಗಳು ಸೇರಿದಂತೆ ಜನಸಂದಣಿ ಪ್ರದೇಶದಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಳ ಮಾಡಲಾಗುವುದು ಎಂದರಲ್ಲದೆ, ಪ್ರಸ್ತುತ ಜಿಲ್ಲೆಯಲ್ಲಿ 392 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ 1.81 ರಷ್ಟು ಪಾಸಿಟಿವಿಟಿ ದರವಿದೆ ಎಂದರು.

ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದ್ದು, ಸೋಂಕು ಉಲ್ಬಣಗೊಂಡರೆ ಕಂಟೈನ್‌ಮೆಂಟ್ ಹಾಗೂ ಸೆಮಿ ಕಂಟೈನ್‌ಮೆಂಟ್ ವಲಯಗಳಾಗಿ ಗುರುತಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್. ರವಿಕುಮಾರ್ ಅವರು ಮಾತನಾಡಿ, ಜಿಲ್ಲೆಯಲ್ಲಿ 13 ಗ್ರಾಮಗಳಿಗೆ ಟ್ಯಾಂಕರ್ ಮೂಲಕ, 30 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು, ಹೆಚ್ಚುವರಿ ಅನುದಾನದ ಅವಶ್ಯಕತೆ ಇದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೋನ ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುನಿ ಕೃಷ್ಣಪ್ಪ, ಮುಖ್ಯ ಯೋಜನಾಧಿಕಾರಿ ವಿನುತಾ ರಾಣಿ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ಡಿವೈಎಸ್ಪಿ ಟಿ. ರಂಗಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಪ್ಪೇಸ್ವಾಮಿ, ತಹಶೀಲ್ದಾರ್ ಗಳು, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಗೂ ಮುನ್ನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಬಿನ್ನಮಂಗಲ ಗ್ರಾಮದಲ್ಲಿ ಇತ್ತೀಚೆಗೆ, ಮಳೆಯಿಂದಾಗಿ ಮನೆ ಗೋಡೆ ಕುಸಿದು, ಮೃತಪಟ್ಟ ಇಬ್ಬರ ಕುಟುಂಬದ ಸದಸ್ಯರಿಗೆ ತಲಾ ರೂ. 5 ಲಕ್ಷ ಪರಿಹಾರದ ಚೆಕ್ಕನ್ನು ಕರ್ನಾಟಕ ರಾಜ್ಯ ಸರ್ಕಾರದ ನೂತನ ಸಚಿವರು,  ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೋವಿಡ್-19 ಹಾಗೂ ಪ್ರಕೃತಿ ವಿಕೋಪ ಉಸ್ತುವಾರಿ ಸಚಿವರಾದ ಎನ್.ನಾಗರಾಜು (ಎಂ.ಟಿ.ಬಿ.) ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿತರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ

ರಾಜಕೀಯ

ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118221"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆಯಾಗಿದ್ದು, ಹತ್ಯೆ ಶಂಕೆ (Murder (Suspected) ವ್ಯಕ್ತವಾಗಿದೆ.

[ccc_my_favorite_select_button post_id="118057"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!