ಬೆಂ.ಗ್ರಾ.ಜಿಲ್ಲೆ: ಪರಿಶಿಷ್ಟ ಜಾತಿ, ಅಲೆಮಾರಿ/ ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದ ವತಿಯಿಂದ 2021-22ನೇ ಸಾಲಿಗೆ ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯದವರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಕೈಗೊಳ್ಳಲು ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್(ಪ್ರೇರಣಾ) (ಮಹಿಳಾ ಸ್ವ ಸಹಾಯ ಗುಂಪುಗಳಿಗೆ) ಯೋಜನೆಗಳಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೌಲಭ್ಯ ಪಡೆಯಲು ಇಚ್ಛಿಸುವವರು ಅರ್ಜಿಯನ್ನು ನಿಗಮದ ವೆಬ್‍ಸೈಟ್ www.adcl.karnataka.gov.in. ನಲ್ಲಿ ಆನ್‍ಲೈನ್ ಮೂಲಕ 2021ರ ಸೆಪ್ಟೆಂಬರ್ 02ರೊಳಗೆ ಸಲ್ಲಿಸಬಹುದಾಗಿದೆ.
ಅರ್ಹತೆಗಳು, ಸಲ್ಲಿಸಬೇಕಾದ ದಾಖಲಾತಿಗಳ ವಿವರ ಹಾಗೂ ಹೆಚ್ಚಿನ ಮಾಹಿತಿಗಾಗಿ ಪರಿಶಿಷ್ಟ ಜಾತಿ, ಅಲೆಮಾರಿ/ ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ: 214, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ದೂರವಾಣಿ ಸಂಖ್ಯೆ: 080-29781036 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಡಾ|| ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ/ ಪರಿಶಿಷ್ಟ ಜಾತಿ, ಅಲೆಮಾರಿ ಅಭಿವೃದ್ಧಿ ಕೋಶದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..