ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿಯಾದಂತ ಸಂದರ್ಭದಲ್ಲಿ ಬಡವರ್ಗದವರಿಗೆ ಆಹಾರ ಭದ್ರತೆ ಒದಗಿಸೋ ಸಲುವಾಗಿ ಜಾರಿಗೆ ತಂದ ಮಹತ್ವದ ಯೋಜನೆ ಇಂದಿರಾ ಕ್ಯಾಂಟೀನ್. ಆರಂಭದಲ್ಲಿ ಬೆಂಗಳೂರಿಗೆ ಸೀಮಿತವಾಗಿದ್ದಂತ ಇಂದಿರಾ ಕ್ಯಾಂಟೀನ್, ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಣೆಗೊಂಡಿದ್ದವು. ಇಂತಹ ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮರು ನಾಮಕರಣಗೊಳಿಸುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮನವಿ ಮಾಡಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಅವರು ಕರ್ನಾಟಕದಾಧ್ಯಂತ ಸ್ಥಾಪಿಸಿರುವಂತ ಇಂದಿರಾ ಕ್ಯಾಂಟೀನ್ ಹೆಸರನ್ನು, ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂಬುದಾಗಿ ಆದಷ್ಟು ಬೇಗ ಬದಲಾವಣೆ ಮಾಡುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ.
ಮುಂದುವರೆದು, ಯಾಕೆ ಕನ್ನಡಿಗರಿಗೆ ಡಾರ್ಕ್ ಡೇ ಎಮೆರ್ಜನ್ಸಿ ಸಂದರ್ಭ ಇಂದಿರಾ ಕ್ಯಾಂಟೀನ್ ನಲ್ಲಿ ಊಟ ಮಾಡುವಾಗ ನೆನಪಿಗೆ ಬರ್ತಾ ಇಲ್ವೋ ಗೊತ್ತಿಲ್ಲ ಎಂದು ಹೇಳಿದ್ದಾರೆ.ಕರ್ನಾಟಕದಾಧ್ಯಂತ ಸ್ಥಾಪಿಸಿರುವಂತ ಇಂದಿರಾ ಕ್ಯಾಂಟೀನ್ ಹೆಸರನ್ನು, ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂಬುದಾಗಿ ಆದಷ್ಟು ಬೇಗ ಬದಲಾವಣೆ ಮಾಡುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ.
ಇನ್ನೂ ಮುಂದುವರೆದೂ, ಯಾಕೆ ಕನ್ನಡಿಗರಿಗೆ ಡಾರ್ಕ್ ಡೇ ಎಮೆರ್ಜನ್ಸಿ ಸಂದರ್ಭ ಇಂದಿರಾ ಕ್ಯಾಂಟೀನ್ ನಲ್ಲಿ ಊಟ ಮಾಡುವಾಗ ನೆನಪಿಗೆ ಬರ್ತಾ ಇಲ್ವೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ಶೇರ್ ಮಾಡಿ.