ದೊಡ್ಡಬಳ್ಳಾಪುರ: ಭಾರತೀಯ ಜನತಾ ಪಾರ್ಟಿ, ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆ ಮತ್ತು ಅಂಜನಾದ್ರಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಆ.8 ರಂದು ಬೆಳಿಗ್ಗೆ 9 ಗಂಟೆಯಿಂದ ತಾಲ್ಲೂಕಿನ ಬಾಶೆಟ್ಟಿಹಳ್ಳಿಯಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಾ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಲಿದೆ.
ಶಿಬಿರದಲ್ಲಿ ಸಾಮಾನ್ಯ ರೋಗ, ಮಕ್ಕಳ ರೋಗ ತಜ್ಞರು ಸೇರಿದಂತೆ ವಿವಿಧ ವಿಭಾಗದ ತಜ್ಞ ವೈದ್ಯರು ಶಿಬಿರದಲ್ಲಿ ಭಾಗವಹಿಸುವ ಮೂಲಕ ಆರೋಗ್ಯ ತಪಾಸಣೆ ನಡೆಸಲಿದ್ದಾರೆ ಎಂದು ಬಿಜೆಪಿ ವಕ್ತಾರ ನಾಗರಾಜು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ).
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ಶೇರ್ ಮಾಡಿ.