ನವದೆಹಲಿ: ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರು ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಆಗಿರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಖೇಲ್ ರತ್ನ ಪ್ರಶಸ್ತಿಗೆ ಮೇಜರ್ ಧ್ಯಾನ್ ಚಂದ್ ಅವರ ಹೆಸರಿಡುವಂತೆ ಅನೇಕ ನಾಗರಿಕರಿಂದ ಮನವಿಗಳು ಬಂದಿವೆ. ಅವರ ಅಭಿಪ್ರಾಯಗಳಿಗಾಗಿ ಅವರನ್ನು ಗೌರವಿಸುತ್ತೇನೆ. ಅವರ ಭಾವನೆಗಳನ್ನು ಗೌರವಿಸಿ ಪ್ರಶಸ್ತಿಯ ಹೆಸರನ್ನು ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಎಂದು ಕರೆಯಲಾಗುವುದು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಭಾರತಕ್ಕೆ ಗೌರವ ತಂದುಕೊಟ್ಟ ಮತ್ತು ದೇಶದ ಹೆಮ್ಮೆಯ ಕ್ರೀಡಾಪಟುಗಳಲ್ಲಿ ಮೇಜರ್ ಧ್ಯಾನ್ ಚಂದ್ ಅಗ್ರಗಣ್ಯರು. ದೇಶದ ಅತ್ಯುನ್ನತ ಕ್ರೀಡಾ ಗೌರವಕ್ಕೆ ಧ್ಯಾನ್ ಚಂದ್ ಅವರ ಹೆಸರನ್ನು ಇಡುವುದು ಸೂಕ್ತವಾಗಿದೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಮೋದಿ ಉಲ್ಲೇಖಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ಶೇರ್ ಮಾಡಿ.