ದೊಡ್ಡಬಳ್ಳಾಪುರ: ಮಗ್ಗದವರ ಬಳಿ ಸೀರೆ ಖರೀದಿಸಿ ಹಿರಿಯ ಕಾರ್ಯಕರ್ತರನ್ನು ಸನ್ಮಾನಿಸುವ ಮೂಲಕ, ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ನಗರ ಘಟಕದ ಪದಾಧಿಕಾರಿಗಳು ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ವಿನೂತನವಾಗಿ ಆಚರಿಸಿದರು.
ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಖರೀದಿಸಿದ ಸೀರೆಯನ್ನು ಮಾಜಿ ಪುರಸಭಾ ಸದಸ್ಯರು ಹಾಗೂ ಬಿಜೆಪಿ ಹಿರಿಯ ಕಾರ್ಯಕರ್ತರಾದ ರಾಜಲಕ್ಷ್ಮಮ್ಮ ಅವರಿಗೆ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷರಾದ ಮಂಜುಳ ರಮೇಶ್, ಮಾಜಿ ನಗರಸಭಾ ಸದಸ್ಯರು, ನಗರ ಪ್ರಧಾನ ಕಾರ್ಯದರ್ಶಿ ಸುಶೀಲ ರಾಘವ, ಪ್ರಧಾನ ಕಾರ್ಯದರ್ಶಿ ನಯನ ರಘುನಂದನ್, ಮುಖಂಡರಾದ ಶ್ರೀದೇವಿ, ಮಾಲಾ, ಚೈತ್ರ, ಉಮಾಮಹೇಶ್ವರಿ, ಗಿರಿಜಾ, ದಾಕ್ಷಾಯಿಣಿ, ವಾಣಿ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ಶೇರ್ ಮಾಡಿ.