ದೊಡ್ಡಬಳ್ಳಾಪುರ: ನಗರದ ಶ್ರೀ ದೇವರಾಜ್ ಅರಸ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಪೋಷಕರ ಸಭೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಆಡಳಿತ ಮಂಡಳಿಯ ನಿರ್ದೇಶಕರಾದ ಜೆ.ರಾಜೇಂದ್ರ, ಶ್ರೀ ದೇವರಾಜ್ ಅರಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಹಾಂತೇಶಪ್ಪ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಜೆ.ವಿ.ಚಂದ್ರಶೇಖರ್ ಮತ್ತಿತರರಿದ್ದರು.
ಈ ವೇಳೆ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ 596 ಅಂಕಗಳಿಸಿ ಕರ್ನಾಟಕ ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದು, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಆಯೇಷಾ ಖಾನಂ ಅವರನ್ನು ಸನ್ಮಾನಿಸಲಾಯಿತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ಶೇರ್ ಮಾಡಿ.