ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ವಿ.ಗಜೇಂದ್ರ ನೇತೃತ್ವದಲ್ಲಿ ಶನಿವಾರ ನಡೆಸಲಾದ ಎರಡು ಕಾರ್ಯಾಚರಣೆಯಲ್ಲಿ 12 ಮಂದಿಯನ್ನು ಬಂಧಿಸಲಾಗಿದೆ.
ಪ್ರಕರಣ – 1. ಸಾಸಲು ಸಮೀಪದ ಗುಮ್ಮನಹಳ್ಳಿಯ ಬಳಿ ಯಾವುದೇ ಪರವಾನಗಿಯಿಲ್ಲದೆ ಅಕ್ರಮವಾಗಿ 2 ಸೀಮೆ ಕರುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಪ್ರಕರಣವನ್ನು ದಾಖಲಿಸಲಾಗಿದೆ.
ಪ್ರಕರಣ- 2. ಬೊಮ್ಮನಹಳ್ಳಿಯ ನೀಲಗಿರಿ ತೋಪಿನಲ್ಲಿ ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ 10 ಜನ ಆರೋಪಿಗಳನ್ನು ವಶಕ್ಕೆ ಪಡೆದು ರೂ 17700 ಹಣವನ್ನು ಅಮಾನತ್ತುಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..