ಆಗಸ್ಟ್ 11ರಂದು ಆರ್.ಎಲ್.ಜಾಲಪ್ಪ ಕಾಲೇಜಿನಲ್ಲಿ ಲಯನ್ಸ್ ಕ್ಲಬ್ ಆರಂಭ: ಲಯನ್ಸ್ ಕ್ಲಬ್‌ನಿಂದ ಆರೋಗ್ಯ, ಶಿಕ್ಷಣ, ಪರಿಸರಕ್ಕೆ ಒತ್ತು – ಜೆ.ರಾಜೇಂದ್ರ

ದೊಡ್ಡಬಳ್ಳಾಪುರ: ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಆರ್.ಎಲ್.ಜಾಲಪ್ಪ ಸಮೂಹ ವಿದ್ಯಾಸಂಸ್ಥೆಗಳಿಂದ ಆರೋಗ್ಯ ಶಿಕ್ಷಣ ಪರಿಸರಕ್ಕೆ ಒತ್ತು ನೀಡಿ, ಸಾಮಾಜಿಕ ಸೇವಾ ಕರ‍್ಯದಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾಸಂಸ್ಥೆಯ ಆವರಣದಲ್ಲಿ ಆ.11ರಂದು ಆರ್.ಎಲ್.ಜಾಲಪ್ಪ ವಿದ್ಯಾಸಂಸ್ಥೆಗಳ ಲಯನ್ಸ್  ಕ್ಲಬ್ ಆರಂಭಿಸಲಾಗುತ್ತಿದೆ ಎಂದು ಆರ್.ಎಲ್.ಜಾಲಪ್ಪ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕ ಜೆ.ರಾಜೇಂದ್ರ ತಿಳಿಸಿದರು.

ನಗರದ ಆರ್.ಎಲ್.ಜಾಲಪ್ಪ ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. 

ದೊಡ್ಡಬಳ್ಳಾಪುರದ ಲಯನ್ಸ್ ಕ್ಲಬ್‌ನಿಂದ ಕಣ್ಣಿನ ಶಿಬಿರಗಳು, ರಕ್ತದಾನ, ಡಯಾಲಿಸಿಸ್, ಮಧುಮೇಹ ತಪಾಸಣಾ ಶಿಬಿರಗಳು ನಡೆಯುತ್ತಿದ್ದು, ಹಲವು ಸೇವೆ ಸಲ್ಲಿಸುತ್ತಿದೆ. ಇದರೊಂದಿಗೆ ಆರ್.ಎಲ್.ಜಾಲಪ್ಪ ವಿದ್ಯಾಸಂಸ್ಥೆಗಳ ಲಯನ್ಸ್  ಕ್ಲಬ್‌ನಿಂದ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವಿಶೇಷವಾಗಿ ಡಯಾಬಿಟಿಕ್ ಹಾಗೂ ಕ್ಯಾನ್ಸರ್ ಶಿಬಿರಗಳಲ್ಲಿ ನುರಿತ ವೈದ್ಯರಿಂದ ಪ್ರಾರಂಭಿಕ ಹಂತದಲ್ಲಿಯೇ ಚಿಕಿತ್ಸೆ, ರಕ್ತದ ಒತ್ತಡಕ್ಕೆ ಚಿಕಿತ್ಸೆ ಶಿಬಿರಗಳನ್ನು ಕೋಲಾರದ ದೇವರಾಜ ಅರಸು ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ಕೈಗೊಳ್ಳಲಾಗುವುದು. ವಿದ್ಯಾಸಂಸ್ಥೆಗಳ ಸಂಸ್ಥಾಪಕ ಆರ್.ಎಲ್.ಜಾಲಪ್ಪ ಅವರ ಪರಿಸರ ಕಾಳಜಿಯನ್ನು ಸಾಕಾರಗೊಳಿಸುವಲ್ಲಿ ಪರಿಸರಕ್ಕೆ ಅನುಕೂಲವಾಗುವ, ಪಶು ಪಕ್ಷಿಗಳಿಗೆ ಅನುಕೂಲವಾಗುವ ಹಣ್ಣುಗಳನ್ನು ನೀಡುವ ಗಿಡಮರ ನೆಡುವ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಲಯನ್ಸ್ ಕ್ಲಬ್‌ನ ಪ್ರಾಂತೀಯ ಛೇರ್‌ಪರ್ಸನ್ ಕೆ.ವಿ.ಪ್ರಭುಸ್ವಾಮಿ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಿದ್ಯಾಸಂಸ್ಥೆಯ ಆವರಣದಲ್ಲಿ ಜಿಲ್ಲೆಯ ಮೊದಲ ಹಾಗೂ 67 ನೇ ಕ್ಲಬ್ ಆಗಿ  ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಷನ್ ರಚನೆಯಾಗುತ್ತಿದೆ. ಸಮಾಜಮುಖಿಯಾಗಿ ಸೇವಾ ಕಾರ್ಯವನ್ನು ನಡೆಸುತ್ತಿರುವವರನ್ನು ಒಂದು ಗೂಡಿಸಿ ಕ್ಲಬ್ ಮಾಡಲಾಗಿದ್ದು, ಲಯನ್ಸ್ ಸೇವಾ ಕಾರ್ಯವನ್ನು ವಿಸ್ತರಿಸಲಾಗುತ್ತಿದೆ. ಆ.11ರಂದು ಜಿಲ್ಲಾ ಮಾಜಿ ರಾಜ್ಯಪಾಲ ಅಚ್ಯುತಾನಂದ ರೆಡ್ಡಿ ನೂತನ ಅಧ್ಯಕ್ಷರಾಗಿ ಎಂ.ಆರ್.ಶ್ರೀನಿವಾಸ್ ಹಾಗೂ ತಂಡಕ್ಕೆ ಪ್ರಮಾಣವಚನ ಬೋಧಿಸಲಿದ್ದಾರೆ. ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಜಿ.ಗೋಪಾಲ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಲಯನ್ಸ್ ಪದಾಧಿಕಾರಿ ಎಂ.ಆರ್.ಶ್ರೀನಿವಾಸ್, ಕಾರ್ಯದರ್ಶಿ ಬಾಬು ರೆಡ್ಡಿ, ಉಪಾಧ್ಯಕ್ಷ ಎಲ್.ಎನ್.ಪ್ರದೀಪ್ ಕುಮಾರ್, ಪ್ರಾಂಶುಪಾಲರಾದ ಡಾ.ಎಂ.ಶ್ರೀನಿವಾಸ್ ರೆಡ್ಡಿ ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]