
ಬೆಂಗಳೂರು: ಇಂದು ಮಧ್ಯಾಹ್ನ 3.30ಕ್ಕೆ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿಯ ಫಲಿತಾಂಶ ವಿದ್ಯಾರ್ಥಿಗಳ ಮೊಬೈಲ್ಗೆ ಬರಲಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ.
ನೂತನ ಶಿಕ್ಷಣ ಸಚಿವರಾಗಿರುವ ಬಿ.ಸಿ.ನಾಗೇಶ್ ನೇತೃತ್ವದಲ್ಲಿ ಫಲಿತಾಂಶ ಹೊರ ಬೀಳಲಿದೆ. ಇವರಿಗೆ ಇಲಾಖೆಯ ನಿರ್ದೇಶಕರು, ಕಾರ್ಯದರ್ಶಿಗಳು ಸಾಥ್ ನೀಡಲಿದ್ದಾರೆ.
ಶಿಕ್ಷಣ ಇಲಾಖೆ ಜುಲೈ 19 ಹಾಗೂ 22 ರಂದು ರಾಜ್ಯಾದ್ಯಂತ SSLC ಪರೀಕ್ಷೆಗಳನ್ನು ನಡೆಸಿತ್ತು. ಈ ಬಾರಿ 8,19,694 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಫಲಿತಾಂಶ ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ sslc.karnataka.gov.in ಅಲ್ಲಿ ಹೊರ ಬೀಳಲಿದೆ.
ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ವಿದ್ಯಾರ್ಥಿಗಳು ಒಟ್ಟು ಶೇ.35 ಅಥವಾ 600 ರಲ್ಲಿ 210 ಅಂಕಗಳನ್ನು ಪಡೆಯಬೇಕು. ಪಾಸ್ ಸರ್ಟಿಫಿಕೇಟ್ ಪಡೆಯಲು, ಅವರು ಭಾಷಾ ಪರೀಕ್ಷೆಯಲ್ಲಿ ಕನಿಷ್ಠ 70 ಅಂಕಗಳನ್ನು ಪಡೆಯಬೇಕು ಎಂದು ತಿಳಿದುಬಂದಿದೆ. (ಸಂಗ್ರಹ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..
 
				 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						