ಬೆಂಗಳೂರು: ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದರು.
ಜುಲೈ 19 ಮತ್ತು 22ರಂದು ನಡೆದಿದ್ದ ಎಸ್ ಎಸ್ಎಲ್ ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,71,443 ವಿದ್ಯಾರ್ಥಿಗಳಲ್ಲಿ ಓರ್ವ ವಿದ್ಯಾರ್ಥಿ ಹೊರತುಪಡಿಸಿ ಉಳಿದೆಲ್ಲರೂ ತೇರ್ಗಡೆಯಾಗಿದ್ದಾರೆ. ಆತ ತನ್ನ ಬದಲು ಬೇರೆಯವರಿಂದ ಪರೀಕ್ಷೆ ಬರೆಸಿದ್ದ. ಹೀಗಾಗಿ ಆತನನ್ನು ಅನುತ್ತೀರ್ಣ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಕೋವಿಡ್ ಕಾರಣದಿಂದ ಈ ಬಾರಿ ವಿಶಿಷ್ಟ ರೀತಿಯಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲಾಗಿತ್ತು. ಮೂರು ವಿಷಯಗಳನ್ನೊಳಗೊಂಡ ಒಂದು ಪತ್ರಿಕೆಯಂತೆ ಒಟ್ಟು ಎರಡು ದಿನ ಪರೀಕ್ಷೆ ನಡೆಸಲಾಗಿತ್ತು.
ಪರೀಕ್ಷೆ ಬರೆದಿರುವ ಎಲ್ಲರನ್ನೂ ಉತ್ತೀರ್ಣಗೊಳಿಸುವುದಾಗಿ ಸರ್ಕಾರ ಘೋಷಣೆ ಮಾಡಿತ್ತು. ಅಂಕ ಆಧಾರಿತ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಬಾರಿ ಒಟ್ಟು 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..