ಬೆಂ.ಗ್ರಾ.ಜಿಲ್ಲೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿನ ಬಿ.ಎಡ್ ಹಾಗೂ ಡಿ.ಎಡ್. ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್ ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ, ಅರೆಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜು ಮತ್ತು ಡಿಪಾರ್ಟ್ಮೆಂಟ್ ಆಫ್ ಸ್ಟೇಟ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೇನಿಂಗ್ ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ, ಅರೆಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ ಹಾಗೂ ಡಿ.ಎಡ್. ಕೋರ್ಸ್ ಗಳಲ್ಲಿ ದಾಖಲಾತಿ ಹೊಂದಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ವಿದ್ಯಾರ್ಥಿಗಳಿಗೆ ರೂ.25,000/-ಗಳ ವಿಶೇಷ ಪ್ರೋತ್ಸಾಹಧನ ನೀಡಲಾಗುವುದು.
ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ನಂ. 216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳೊಂದಿಗೆ 2021 ಆಗಸ್ಟ್ 31ರೊಳಗೆ ಸಲ್ಲಿಸುವುದು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳ ವಿವರ, ಷರತ್ತುಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್ ಸೈಟ್: https://dom.karnataka.gov.in, ಜಿಲ್ಲಾ ಕಚೇರಿಯ ವೆಬ್‌ಸೈಟ್: https://dom.karnataka.gov.in/bengaluru_rural/public ಅಥವಾ ದೂರವಾಣಿ ಸಂಖ್ಯೆ: 080-29787455 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..