ರಾಮನಗರ: ಲವ್ ಯೂ ರಚ್ಚು ಚಿತ್ರದ ಶೂಟಿಂಗ್ ವೇಳೆ ವಿದ್ಯುತ್ ತಂತಿ ತಗುಲಿ ಅಸಿಸ್ಟೆಂಟ್ ಪೈಟರ್ ವಿವೇಕ್ ಮೃತಪಟ್ಟಿದ್ದಾನೆ.
ಬಿಡದಿ ಸಮೀಪದಲ್ಲಿ ನಡೆಯುತ್ತಿದ್ದ ಶೂಟಿಂಗ್ ವೇಳೆ ಅವಘಡ ಸಂಭವಿಸಿದೆ.
ಕ್ರೇನ್ ಮೂಲಕ ರೋಪ್ ಶೂಟ್ ಮಾಡಲಾಗ್ತಿತ್ತು. ಈ ವೇಳೆ ಈ ವೇಳೆ 11 KV ಗೆ ಕ್ರೇನ್ ತಗುಲಿದ ಪರಿಣಾಮ ವಿವೇಕ್ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಸ್ಥಳಕ್ಕೆ ದೌಡಾಯಿಸಿದ ಬಿಡದಿ ಪೊಲೀಸರು ಚಿತ್ರದ ನಿರ್ದೇಶಕ ಮತ್ತು ಫೈಟ್ ಮಾಸ್ಟರ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಅಜಯ್ ರಾವ್ ಮತ್ತು ರಚಿತಾ ರಾಮ್ ಅಭಿಯನದ ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ರಾಮನಗರ ತಾಲೂಕಿನ ಜೋಗನದೊಡ್ಡಿಯಲ್ಲಿ ನಡೆಯುತಿತ್ತು. ಈ ಸಂದರ್ಭದಲ್ಲಿ ಈ ವೇಳೆ ರೋಪ್ ಎಳೆಯುವಾಗ ಫೈಟರ್ ವಿವೇಕ್ ಅವರಿಗೆ ವಿದ್ಯುತ್ ತಂತಿ ತಗುಲಿದೆ. ಅವರನ್ನು ಆಸ್ಪತ್ರೆಗೆಸಾಗಿಸುವಷ್ಟರಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಮೃತ ವಿವೇಕ್ ತಮಿಳುನಾಡು ಮೂಲದವರುಎನ್ನಲಾಗಿದೆ. ರಾಜರಾಜೇಶ್ವರಿ ನಗರ ಆಸ್ಪತ್ರೆಯಲ್ಲಿ ವಿವೇಕ್ ಮೃತದೇಹವನ್ನು ಇರಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..
 
				 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						