ದೊಡ್ಡಬಳ್ಳಾಪುರ: ತಾಲೂಕಿನ ಹಿರಿಯ ರಂಗಭೂಮಿ ಕಲಾವಿದ ದೊಡ್ಡಗುಂಡಪ್ಪನಾಯಕನಹಳ್ಳಿ ಅಂಜನಾಚಾರ್(78) ಭಾನುವಾರ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮೃತರು ನಾಲ್ಕು ಗಂಡು, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ದೊಡ್ಡಗುಂಡಪ್ಪನಾಯಕನಹಳ್ಳಿಯಲ್ಲಿ ಸೋಮವಾರ ಮಧ್ಯಾಹ್ನ ನೆರವೇರಿತು.
ರಂಗಭೂಮಿ, ಭಜನೆ, ಕೀರ್ತನೆಗಳ ಕಲಾವಿದರಾಗಿದ್ದ ಅಂಜನಾಚಾರ್ ವಿವಿದೆಡೆಗಳಲ್ಲಿ ನೂರಾರು ಕಾರ್ಯಕ್ರಮಗಳನ್ನು ನೀಡಿ ಉತ್ತಮ ಕಲಾವಿದರೆಂದು ಮನ್ನಣೆ ಗಳಿಸಿ, ವಿವಿಧ ಸಂಘ ಸಂಸ್ಥೆಗಳ ಸನ್ಮಾನಕ್ಕೆ ಪಾತ್ರರಾಗಿದ್ದರು.
ಅಂಜನಾಚಾರ್ ಅವರ ನಿಧನಕ್ಕೆ ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘ ಸೇರಿದಂತೆ ತಾಲೂಕಿನ ಕಲಾವಿದರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..